ಬೆಂಗಳೂರು: ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ಎದುರಾಗಿದ್ದು, ವಿದ್ಯುತ್ ದರ ಹೆಚ್ಚಳಕ್ಕೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ.
Advertisement
ಪ್ರತಿ ಯೂನಿಟ್‌ಗೆ 1.50 ಪೈಸೆ ಹೆಚ್ಚಳ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಪ್ರತಿ ಯುನಿಟ್‌ಗೆ 1 ರೂ. 50 ಪೈಸೆ ಹೆಚ್ಚಳ ಮಾಡುವಂತೆ ಕೆಇಆರ್‌ಸಿಗೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ನಷ್ಟದ ನೆಪ ಹೇಳಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 1.50 ರೂ. ಹೆಚ್ಚಳ ಮಾಡುವಂತೆ ಕೆಇಆರ್‌ಸಿಗೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ. ಇದನ್ನೂ ಓದಿ: ಮಕ್ಕಳಿಗೂ ವಕ್ಕರಿಸಿತು ಹೊಸ ತಳಿ- ಮಹಾರಾಷ್ಟ್ರದಲ್ಲಿ 3 ವರ್ಷದ ಮಗುವಿನಲ್ಲಿ ಓಮಿಕ್ರಾನ್ ಪತ್ತೆ
Advertisement
Advertisement
ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಬೆಸ್ಕಾಂ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಶೀಘ್ರವೇ ವಿದ್ಯುತ್ ದರವೂ ಹೆಚ್ಚಳವಾಗುವ ಸಾಧ್ಯತೆ ಇದೆ.