ಧಾರವಾಡ: ಪೇಡಾ ನಗರಿಯಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಎಸ್‍ಯುಸಿಐ ಸಂಘಟನೆ ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗುತ್ತಿದ್ದು, ಇದೀಗ ಸರ್ಕಾರ ವಿದ್ಯುತ್ ದರವನ್ನೂ ಏರಿಕೆ ಮಾಡಿ ಬಡವರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ವಿಗ್ರಹ ಮಾಡೋದು ಹರಾಮ್, ಆದ್ರೇ ಜೀವನೋಪಾಯಕ್ಕೆ ಅದು ಅನಿವಾರ್ಯ: ಉಮರ್ ಷರೀಫ್
Advertisement
Advertisement
ಕೇಂದ್ರದ ಪ್ರಧಾನಿ ಮೋದಿ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಅನುಸರಿಸಿ ಬಡವರಿಗೆ ನಿತ್ಯ ತೊಂದರೆ ಕೊಡುತ್ತಿದೆ. ತೈಲ ಬೆಲೆ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಬಡವರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಹಲಾಲ್ ಆಯ್ತು ಈಗ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ ಅಭಿಯಾನ
Advertisement
Advertisement
ಇದೀಗ ಗಾಯದ ಮೇಲೆ ಬರೆ ಎಂಬಂತೆ ವಿದ್ಯುತ್ ದರವನ್ನು ಸರ್ಕಾರ ಹೆಚ್ಚಳ ಮಾಡಿದೆ. ಕೂಡಲೇ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಕೈ ಬಿಟ್ಟು ಬಡವರ ಹಿತ ಕಾಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.