ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಗ್ರಾಹಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬೆಸ್ಕಾಂ (Bescom), ಮೆಸ್ಕಾಂ (Mescom) ವ್ಯಾಪ್ತಿಯಲ್ಲಿ ವಿದ್ಯುತ್ ದರ (Electricity Price) ಇಳಿಕೆ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ಅವರು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2D ಮೀಸಲಾತಿ – ಸಂಪುಟ ಸಭೆಯಲ್ಲಿ ನಿರ್ಧಾರ
Advertisement
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ.@CMofKarnataka
— Sunil Kumar Karkala (@karkalasunil) December 29, 2022
Advertisement
ಬೆಸ್ಕಾಂ ವ್ಯಾಪ್ತಿಯಲ್ಲಿ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
ಇತ್ತೀಚೆಗಷ್ಟೇ ಇಂಧನ ಹೊಂದಾಣಿಕೆಯ ಶುಲ್ಕವನ್ನು ಪರಿಸ್ಕರಿಸಿ ಆದೇಶ ಹೊರಡಿಸಲಾಗಿತ್ತು. ಇದರಿಂದ ವಿದ್ಯುತ್ ದರ ಏರಿಕೆಯಾಗಿ ಗ್ರಾಹಕರಿಗೆ ಹೊರೆಯಾಗಿತ್ತು. ಈ ವೇಳೆ ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: ಕಳಸಾ ಬಂಡೂರಿ ಯೋಜನೆಗೆ ಗ್ರೀನ್ ಸಿಗ್ನಲ್ – ಡಿಪಿಆರ್ ಚುನಾವಣೆಗೆ ಮಾತ್ರ ಮೀಸಲಾಗಬಾರದು: ರೈತರ ಆಗ್ರಹ
Advertisement
ಈಗ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಇದರಿಂದ ವಿದ್ಯುತ್ ದರ ಇಳಿಕೆ ಆಗಲಿದೆ.