-ಇದು ಸಿದ್ದರಾಮಯ್ಯರ ಸರ್ಕಾರವೇ ಅಥವಾ ನಿಜಾಮರ ಆಡಳಿತವೇ ಎಂದ ಬಿವೈವಿ
ಬೆಂಗಳೂರು: ರಾಜ್ಯದಲ್ಲಿ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಕ್ಷೇಪಿಸಿದರು.
- Advertisement 2-
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರ್ಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ವಿಫಲವಾಗಿದೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಐಪಿಎಲ್ 2025: ಮೊದಲ 3 ಪಂದ್ಯಗಳಿಗೆ ರಾಜಸ್ಥಾನ ರಾಯಲ್ಸ್‌ಗೆ ರಿಯಾನ್ ಪರಾಗ್ ಕ್ಯಾಪ್ಟನ್
- Advertisement 3-
- Advertisement 4-
ಇವರ ಹುಳುಕನ್ನು ಮುಚ್ಚಿ ಹಾಕಲು ಪದೇಪದೇ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ಕಡೆ ಪುಕ್ಕಟೆ ವಿದ್ಯುತ್ ಎನ್ನುತ್ತಾರೆ. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. 3 ಫೇಸ್ ವಿದ್ಯುತ್‌ನ್ನು 7 ಗಂಟೆ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ. ಮತ್ತೊಂದು ಕಡೆ ಪಿಡಬ್ಲ್ಯೂಡಿ ಮತ್ತಿತರ ಇಲಾಖೆಗಳು 6,500 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಜನರಿಗೆ ಬರೆ ಎಳೆಯುವ ಸರ್ಕಾರದ ಕ್ರಮ ಅಕ್ಷಮ್ಯ ಅಪರಾಧ. ಇದನ್ನು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದರು.
ಇದೇ ವೇಳೆ ಸ್ಮಾರ್ಟ್ ಮೀಟರ್, ವಿದ್ಯುತ್ ದರ ಏರಿಕೆ, ಮೆಟ್ರೋ ದರ ಮತ್ತಿತರ ಬೆಲೆ ಏರಿಕೆ ಮತ್ತಿತರ ವಿಚಾರವನ್ನು ಚರ್ಚಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ. ಅಲ್ಪಸಂಖ್ಯಾತರ ಓಲೈಕೆ ಮಾಡಲು ಹೊರಟಿದೆ. ಮೇಕೆದಾಟು ಎಂದು ತಿಳಿಸಿ ಅಧಿಕಾರಕ್ಕೆ ಬಂದಿದ್ದಾರೆ. ಏನು ಮಾಡಿದ್ದಾರೆಂದು ಡಿಕೆಶಿಯವರನ್ನು ಪ್ರಶ್ನಿಸಬೇಕಿದೆ. ಅಧಿಕಾರದ ಮದ, ಭ್ರಮೆ ಇವರ ನೆತ್ತಿಗೇರಿದೆ. ಹೇಳಿ ಕೇಳಿ ಡಿ.ಕೆ.ಶಿವಕುಮಾರ್ (DK Shivakumar) ಅವರು ದೇಶದ ಎರಡನೇ ಅತೀ ಶ್ರೀಮಂತ ಶಾಸಕ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ನಿತಿನ್‌ಗೆ ಜೊತೆಯಾಗಿ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಶ್ರೀಲೀಲಾ
ಇದು ಪಿಕ್ ಪಾಕೆಟ್ ಸರ್ಕಾರ:
ಸಾರ್ವತ್ರಿಕ ಚುನಾವಣೆಯಲ್ಲಿ ಜನರ ಕಿವಿಗೆ ಹೂವು ಮುಡಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು ಜನರಿಗೆ ಮೋಸ, ವಂಚನೆ ಮಾಡುತ್ತಿದ್ದಾರೆ. ನಾಡಿನ ಜನರು ಎಚ್ಚೆತ್ತುಕೊಳ್ಳಬೇಕಿದೆ. ಇದು ಪಿಕ್ ಪಾಕೆಟ್ ಸರ್ಕಾರ. ಒಂದೆಡೆ ಗ್ಯಾರಂಟಿ ಕೊಡುವುದಾಗಿ ಹೇಳಿಕೊಂಡು ಜನಸಾಮಾನ್ಯರಿಗೆ ಹೊರೆ ಹಾಕುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳು, ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ಮಸೂದೆ ಸದನದಲ್ಲಿ ತರುತ್ತಿದ್ದಾರೆ. ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ. ಇದು ಕಾಂಗ್ರೆಸ್ ಸರ್ಕಾರವೇ? ಸಿದ್ದರಾಮಯ್ಯರ ಸರ್ಕಾರವೇ ಅಥವಾ ನಿಜಾಮರ ಆಡಳಿತವೇ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಮುಸ್ಲಿಮರ ಓಲೈಕೆ ಮತ್ತು ರಾಜ್ಯದ ಹಿಂದೂಗಳಿಗೆ ಅವಮಾನ ಮಾಡುವ ಕೆಲಸವನ್ನು ಸಿದ್ದರಾಮಯ್ಯ (Siddaramaiah) ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.
ಅವರ ಹಿಂದಿನ ಅವಧಿಯಲ್ಲಿ ಶಾದಿ ಭಾಗ್ಯ ತಂದಿದ್ದಲ್ಲದೆ, ಟಿಪ್ಪು ಜಯಂತಿ ತಂದಿದ್ದರು. ಈಗ ವಕ್ಫ್ ಬಿಲ್ ದುರುಪಯೋಗ ಪಡಿಸಿಕೊಂಡು ಲಕ್ಷ-ಕೋಟಿ ಮೌಲ್ಯದ ಜಮೀನನ್ನು ಕಬಳಿಸುವ ಕೆಲಸಕ್ಕೆ ಕಾಂಗ್ರೆಸ್ (Congress) ಪುಡಾರಿಗಳು ಹೊರಟಿದ್ದಾರೆ. ಅವರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಹಿಂದೂಗಳಿಗೆ ಮಾಡುವ ಅವಮಾನಕ್ಕೆ ಇವರು ಬೆಲೆ ತೆರಲೇಬೇಕಾಗುತ್ತದೆ ಎಂದು ಆರೋಪಿಸಿದರು.ಇದನ್ನೂ ಓದಿ: ಸಚಿವರ ಮೇಲೆ 2 ಸಲ ಹನಿಟ್ರ್ಯಾಪ್ ಯತ್ನ – ಸತೀಶ್ ಜಾರಕಿಹೊಳಿ ಬಾಂಬ್