- ಆನೆ ದಾಳಿಯ ವಿಡಿಯೋ ಮೊಬೈಲ್‌ನಲ್ಲಿ ಸೆರೆ
ಚಾಮರಾಜನಗರ: ಕಾಡಾನೆ ದಾಳಿಯಿಂದ (Elephant Attack) ಜರ್ಮನ್ ಪ್ರವಾಸಿಗ (German Tourist) ಸಾವಿಗೀಡಾದ ಘಟನೆ ತಮಿಳುನಾಡಿನ (Tamil Nadu) ಕೊಯಮತ್ತೂರು ಜಿಲ್ಲೆಯ ಎಟಿಆರ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.
ಆನೆ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಮೈಕೆಲ್ ಶುಲ್ಜ್ (77) ಎಂದು ಗುರುತಿಸಲಾಗಿದೆ. ಟೈಗರ್ ವ್ಯಾಲಿ ರಸ್ತೆಯಲ್ಲಿ ಬೈಕ್‍ನಲ್ಲಿ ತೆರಳುವಾಗ ಆನೆ ಇರುವುದನ್ನು ಗಮನಿಸಿಯೂ ಅವರು ಸಮೀಪ ಹೋಗಿದ್ದಾರೆ. ಈ ವೇಳೆ ಬೈಕ್ ಸಮೇತ ಅವರನ್ನು ಆನೆ ಎತ್ತಿ ಎಸೆದಿದೆ. ಅವರು ತೀವ್ರ ಗಾಯಗೊಂಡಿದ್ದರು. ಅವರನ್ನು ಪೊಲ್ಲಾಚಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ದುರಂತ| ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಬಲಿ
ಆನೆ ಪ್ರವಾಸಿಗನ ಮೇಲೆ ದಾಳಿ ನಡೆಸಿರುವುದನ್ನು ಹಿಂದೆ ಬರುತ್ತಿದ್ದ ವಾಹನ ಸವಾರರು ವಿಡಿಯೋ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ದ್ವೇಷ ಭಾಷಣಕ್ಕೆ 3 ವರ್ಷ ಜೈಲು – ಹೊಸ ಬಿಲ್ ತರಲು ರಾಜ್ಯ ಸರ್ಕಾರ ಸಿದ್ಧತೆ?