ಹಾಸನ: ಬೈಕ್‍ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ (Elephant) ದಾಳಿ ನಡೆಸಿದ ಘಟನೆ ಬೇಲೂರು ತಾಲೂಕಿನ, ಚಿಕ್ಕಸಾಲಾವಾರ ಗ್ರಾಮದ ಬಳಿ ನಡೆದಿದೆ. ಆನೆ ದಾಳಿಯಿಂದ ಬೈಕ್‍ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದೆ.
ಭಾನುವಾರ ಬೆಳಗ್ಗೆ ಉಮೇಶ್ ಹಾಗೂ ರೇವತಿ (50) ದಂಪತಿ ಕೂಲಿ ಕೆಲಸಕ್ಕೆ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ರೇವತಿಯವರ ತಲೆ ಮತ್ತು ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಕೇರಳಾಪುರದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಪನ್ನ
Advertisement
Advertisement
ಗಾಯಾಳುಗಳಿಗೆ ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
Advertisement
Advertisement
ಸ್ಥಳಕ್ಕೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಕಲ್ಲಿನಿಂದ ಹೊಡೆದು ಕೊಂದ ತಂದೆ!