DistrictsKarnatakaKodaguLatestMain Post

ಕೊಡಗಿನ ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಮಡಿಕೇರಿ: ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿಯಲ್ಲಿ ನಡೆದಿದೆ.

ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ಬಳಿಯ ಅರೆಕಾಡು ರಸ್ತೆಯಲ್ಲಿರುವ ವಿವೇಕ್ ಅಪ್ಪಯ್ಯರವರ ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಗಂಡಾನೆಯ ಶವ ಪತ್ತೆಯಾಗಿದೆ. ಇದನ್ನೂ ಓದಿ: ಅಮ್ಮನ ಜೊತೆ ಮಲಗಿದ್ದವನ ಮರ್ಮಾಂಗವನ್ನೇ ಬ್ಲೇಡ್‍ನಿಂದ ಕಟ್ ಮಾಡಿದ ಮಗಳು!

ಭಾನುವಾರ ಸುರಿದ ಭಾರೀ ಮಳೆಗೆ ಕಾಫಿ ತೋಟದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗೆ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ವಿದ್ಯುತ್ ಕಂಬವು ಸಹಿತ ಮುರಿದು ಬಿದ್ದಿದೆ. ಈ ವೇಳೆ ವಿದ್ಯುತ್ ತಂತಿಗೆ ಕಾಡಾನೆ ಸ್ಪರ್ಶಿಸಿದ್ದು ಆನೆಯು ಸ್ಥಳದಲ್ಲೇ ಸಾವನ್ನಪ್ಪಿದೆ. ಇದನ್ನೂ ಓದಿ: 2 ವರ್ಷಗಳ ಬಳಿಕದ ದಾಖಲೆ – ಅಕ್ಷಯ ತೃತೀಯದಂದು ಭರ್ಜರಿ ಸೇಲ್

ಸ್ಥಳೀಯ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ದುರ್ವಾಸನೆ ಬಂದಿದ್ದು ಕಾಫಿ ತೋಟದಲ್ಲಿ ಪರಿಶೀಲಿಸಿದಾಗ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಿ ಎನ್ ಎನ್ ಮೂರ್ತಿ, ಡಿ ಸಿ ಎಫ್ ಪೂವಯ್ಯ, ಎ ಸಿ ಎಫ್ ನೆಹರೂ, ಪಶುವೈದ್ಯಾದಿಕಾರಿ ಡಾ ಚೆಟ್ಟಿಯಪ್ಪ, ಕುಶಾಲನಗರ ವಲಯ ಅರಣ್ಯ ಅಧಿಕಾರಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿ ಕೂಡಕಂಡಿ ಸುಬ್ರಾಯ, ಕನ್ನಂಡ ರಂಜನ್ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

Leave a Reply

Your email address will not be published.

Back to top button