ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯಲ್ಲಿ ಒಂಟಿ ಕಾಡಾನೆ ಹಾವಳಿ ದಿನೇದಿನೇ ಹೆಚ್ಚುತ್ತಿದೆ.
ಇದೂವರೆಗೂ ರಾತ್ರಿ ವೇಳೆಯಲ್ಲಿ ಮಾತ್ರ ತೋಟ-ಹಿತ್ತಲಿಗೆ ನುಗ್ಗಿ ದ್ವಂಸ ಮಾಡುತ್ತಿದ್ದ ಕಾಡಾನೆ ಈಗ ಹಗಲು ವೇಳೆಯಲ್ಲೇ ಕಾಣಿಸಿಕೊಂಡಿಸಿದೆ. ಆಗುಂಬೆಯಿಂದ ಶೃಂಗೇರಿಗೆ ಹೋಗುವ ರಸ್ತೆಯಲ್ಲಿರುವ ವಾಟೆಹಳ್ಳಿ ಗ್ರಾಮದ ಬಳಿ ರಸ್ತೆಯಲ್ಲಿ ಆರಾಮವಾಗಿ ನಡೆದುಕೊಂಡು ಹೋಗಿದೆ. ರಾತ್ರಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆ ಇದೀಗ ಹಗಲು ಕಾಣಿಸಿಕೊಂಡಿದ್ದು, ಅಲ್ಲಿನ ನಿವಾಸಿಗಳಲ್ಲಿ ಮತ್ತಷ್ಟು ಆತಂಕ ಎದುರಾಗಿದೆ. ಇದನ್ನೂ ಓದಿ: ರೈತರ ತೋಟಗಳಿಗೆ ಆನೆ ದಾಳಿ ತಡೆಯಲು ಹೊಸ ತಂತ್ರಕ್ಕೆ ಮುಂದಾದ ಅರಣ್ಯ ಇಲಾಖೆ
Advertisement
ಈ ಆನೆಯನ್ನು ಹಿಡಿದು ಸ್ಥಳಾಂತರ ಮಾಡಿ ಎಂದು ಈ ಭಾಗದ ಜನತೆ ಹಲವು ವರ್ಷಗಳಿಂದ ಆಗ್ರಹಿಸುತ್ತಿದ್ದಾರೆ. ಆದರೆ, ಇದೂವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಅಲ್ಲಿನ ಜನ ಮಾತ್ರ ಆತಂಕದಲ್ಲಿ ಬದುಕೋದು ತಪ್ಪಿಲ್ಲ.
Advertisement