ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ (Wild Elephant) ಮೃತಪಟ್ಟ ಘಟನೆ ಬನ್ನೇರುಘಟ್ಟ (Bannerghatta) ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ.
ಬೆಳಗ್ಗೆ ಕಾಡಾನೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಕಾಡಾನೆ ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲೇ ನರಳಾಡಿದೆ. ಇದನ್ನೂ ಓದಿ: ಅಪ್ಪು ಅಗಲಿಕೆಗೆ 3 ವರ್ಷ, ರಾಜ್ಯಾದ್ಯಂತ ಪುಣ್ಯಸ್ಮರಣೆ – ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೊನೆಗೆ ರಸ್ತೆಯಲ್ಲೇ ಸಾವನ್ನಪ್ಪಿದೆ. ಸ್ಥಳಕ್ಕೆ ಬನ್ನೇರುಘಟ್ಟ ವೈದ್ಯರ ತಂಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.