ಮಂಗಳೂರು: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯನ್ನು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ಕ್ಷೇತ್ರದ ಆನೆ ಯಶಸ್ವಿನಿ (Elephant Yashaswini) ಎತ್ತಿ ಬಿಸಾಡಿದ ಘಟನೆ ನಡೆದಿದೆ.
ಪೋಲೀಸರು ಆನೆಯೊಂದಿಗೆ ಫೋಟೋ ತೆಗೆಯುತ್ತಿದ್ದ ಸಂದರ್ಭದಲ್ಲಿ ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಆನೆಯ ಎದುರು ಸಾಗಿದ್ದ. ವ್ಯಕ್ತಿಯನ್ನು ನೋಡಿದ ಕೂಡಲೇ ಆನೆ ತನ್ನ ಸೊಂಡಿಲಿನಿಂದ ಎತ್ತಿ ಎಸೆದಿದೆ. ಇದನ್ನೂ ಓದಿ: ನಾವು ಭಾರತದ ಜೊತೆಗಿದ್ದೇವೆ: ಪಾಕಿಸ್ತಾನ ಉಪ ಪ್ರಧಾನಿ
ಎಸೆದ ರಭಸಕ್ಕೆ ವ್ಯಕ್ತಿ ನೆಲಕ್ಕೆ ಅಪ್ಪಳಿಸಿದ್ದು ಯಾವುದೇ ಗಾಯಗಳಾಗದೇ ಪಾರಾಗಿದ್ದಾರೆ. ವ್ಯಕ್ತಿ ಕುಡಿತದ ಮತ್ತಿನಲ್ಲೇ ತೂರಾಡಿಕೊಂಡು ಬಂದಿರೋದ್ರಿಂದಲೇ ಆನೆ ಕೋಪಗೊಂಡು ಎತ್ತಿ ಬಿಸಾಡಿದೆ ಎನ್ನಲಾಗಿತ್ತಿದೆ.