ಮಡಿಕೇರಿ: ಗ್ರಾಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಬಲಿ ಪಡೆದಿದ್ದ ಕಾಡಾನೆಯನ್ನು (Elephant) ಬುಧವಾರ ಇತರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಗ್ರಾಮದ ಜನರಿಗೆ ದಿನನಿತ್ಯ ರಸ್ತೆಯಲ್ಲಿ ನಿಂತು ತೊಂದರೆ ನೀಡುತ್ತಿದ್ದ ಕಾಡಾನೆಯನ್ನು ಅರಣ್ಯ ಪ್ರದೇಶಕ್ಕೆ ಓಡಿಸುವ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಿರೀಶ್ ಮೇಲೆ ಆನೆ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಸೋಮವಾರ ಮೃತಪಟ್ಟಿದ್ದರು.
Advertisement
Advertisement
ಈ ಹಿನ್ನೆಲೆಯಲ್ಲಿ ಆನೆಯನ್ನು ಹಿಡಿಯಲು ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಳೆದ 2 ದಿನಗಳಿಂದ ಮಡಿಕೇರಿ ತಾಲೂಕಿನ ಕೆದಕಲ್ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕಾನೆಗಳ ಸಹಾಯದಿಂದ ಹುಡುಕಾಟ ನಡೆಸಿದ್ದಾರೆ. ಒಂಟಿ ಸಲಗ ಮಾತ್ರ ನಿನ್ನೆಯವರೆಗೂ ಗೋಚರಿಸಿರಲಿಲ್ಲ. ದುಬಾರೆ ಸಾಕಾನೆ ಶಿಬಿರದಿಂದ ಸುಮಾರು 6 ಆನೆಗಳು 50ಕ್ಕೂ ಹೆಚ್ಚು ಸಿಬ್ಬಂದಿ ಕಾಡಾನೆಯ ಶೋಧ ಕಾರ್ಯವನ್ನು ಇಂದು ಮುಂದುವರಿಸಿದ್ದರು. ಇದನ್ನೂ ಓದಿ: ತಮಿಳುನಾಡು ಕಾವೇರಿ ನೀರಿನ ಸಮರ್ಪಕ ಬಳಕೆ ಮಾಡುತ್ತಿಲ್ಲ – ಸುಪ್ರೀಂನಲ್ಲಿ ಕರ್ನಾಟಕ ಆಕ್ಷೇಪ
Advertisement
Advertisement
ಇಂದು ಮಧ್ಯಾಹ್ನದ ವೇಳೆಯಲ್ಲಿ ಕೆದಕಲ್ ಸಮೀಪದ ಹೊರೂರು ಬಳಿಯ ಕಳತ್ಮಾಡು ಎಸ್ಟೇಟ್‌ನಲ್ಲಿ ಒಂಟಿ ಸಲಗ ಇರುವುದು ಗೋಚರಿಸಿದೆ. ಬಳಿಕ ಅದಕ್ಕೆ ಅರವಳಿಕೆ ನೀಡಿ ಆನೆಯನ್ನು ಖೆಡ್ಡಾಗೆ ಬೀಳಿಸಿ ದುಬಾರೆ ಸಾಕಾನೆ ಶಿಬಿರಕ್ಕೆ ಪುಂಡಾನೆಯನ್ನು ಸ್ಥಳಾಂತರ ಮಾಡಲಾಗಿದೆ. ಒಂದೇ ದಿನ 4 ಕಡೆ ದಾಳಿ ನಡೆಸಿ ಓರ್ವನನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಸೆರೆ ಹಿಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಆಗಿದೆ. ಇದನ್ನೂ ಓದಿ: ಸೆ.18-22 ವಿಶೇಷ ಸಂಸತ್ ಅಧಿವೇಶನ- ಪ್ರಮುಖ 9 ವಿಷಯಗಳ ಚರ್ಚೆಗೆ ಸೋನಿಯಾ ಗಾಂಧಿ ಆಗ್ರಹ
Web Stories