ಚಾಮರಾಜನಗರ: ಬೇಸಿಗೆ ಆರಂಭವಾಗುತ್ತಿದ್ದಂತೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಿಂದ ನಾಡಿನತ್ತ ಲಗ್ಗೆ ಇಡುತ್ತಿರುವ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಕಾಡಿಗೆ ಓಡಿಸಲು ಕಾರ್ಯಚರಣೆ ಮಾಡಿದ್ದಾರೆ. ಈ ಅದ್ಭುತ ವಿಡಿಯೋ ಡ್ರೋನ್ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು ನೋಡುಗರ ಮನ ಗೆದ್ದಿದೆ.
ಬೇಸಿಗೆ ಆರಂಭವಾಗುತ್ತಿದ್ದಂತೆ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತ್ತದೆ. ಹಾಗೆಯೇ ಆಹಾರ ಅರಸಿ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಓಂಕಾರ ವಲಯದತ್ತ ಲಗ್ಗೆ ಇಟ್ಟ ಕಾಡಾನೆಗಳ ಗುಂಪೊಂದನ್ನು ಅರಣ್ಯ ಇಲಾಖೆ ಅವರು ಹರಸಾಹಸ ಪಟ್ಟು ಕಾಡಿಗಟ್ಟಿದ್ದಾರೆ. ಈ ಕಾರ್ಯಚರಣೆಯ ಒಂದು ಅದ್ಭುತ ನೋಟವನ್ನು ಡ್ರೋನ್ ಕ್ಯಾಮೆರಾದ ಸಹಾಯದಿಂದ ಸೆರೆಹಿಡಿಯಲಾಗಿದ್ದು, ಈ ವಿಡಿಯೋ ನೋಡಿದವರು ಅಬ್ಬಾ! ಎಂಥ ನೋಟ ಅಂತ ಪ್ರಕೃತಿಯ ಸೌದರ್ಯವನ್ನು ಹೊಗಳಿದ್ದರೆ.
Advertisement
Advertisement
ಡ್ರೋನ್‍ನ ಶಬ್ಧಕ್ಕೆ ಕಾಡಿನತ್ತ ಆನೆಗಳ ಹಿಂಡು ಹೆಜ್ಜೆ ಹಾಕುತ್ತಿರುವ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಒಂದೆಡೆ ಹಿಂಡು ಹಿಂಡಾಗಿ ಬರುತ್ತಿರುವ ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆಯಿಂದ ಹರಸಾಹಸ ಪಡುತ್ತಿರುವ ದೃಶ್ಯವಾದರೆ, ಇನ್ನೊಂದೆಡೆ ಪ್ರಕೃತಿಯ ಸೌಂದರ್ಯದ ಚಿತ್ರಣವನ್ನು ಡ್ರೋನ್ ಕ್ಯಾಮೆರಾ ಸೆರೆಹಿಡಿದಿದೆ.
Advertisement
https://www.youtube.com/watch?v=bmWfLrrF47s
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv