ನವದೆಹಲಿ: ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ (X) ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಸಿಇಒ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ (Elon Musk) ಅಭಿನಂದಿಸಿದ್ದಾರೆ.
ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕರಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮಸ್ಕ್ ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ: Microsoft Outage: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲ; ಇದು ಸೈಬರ್ ದಾಳಿಯಲ್ಲ – ಕ್ರೌಡ್‌ಸ್ಟ್ರೈಕ್ ಸಿಇಒ ಸ್ಪಷ್ಟನೆ!
Congratulations PM @NarendraModi on being the most followed world leader!
— Elon Musk (@elonmusk) July 19, 2024
ಕೆಲ ದಿನಗಳ ಹಿಂದೆಯಷ್ಟೇ, ಎಕ್ಸ್ ಖಾತೆಯಲ್ಲಿ ಮೋದಿ ಅವರ ಫಾಲೋವರ್ಸ್ ಸಂಖ್ಯೆ 100 ಮಿಲಿಯನ್ (10 ಕೋಟಿ) ತಲುಪಿತ್ತು. ಎಕ್ಸ್ ಖಾತೆಯಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕರ ಪಟ್ಟಿಯಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಕ್ ಒಬಾಮಾ ಮೊದಲ ಸ್ಥಾನದಲ್ಲಿದ್ದಾರೆ.
ಬರಕ್ ಒಬಾಮಾ 131 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಅವರ ನಂತರದ ಸ್ಥಾನದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿದ್ದಾರೆ. 2024 ರ ಅಮೆರಿಕ ಚುನಾವಣೆಗಳಿಗೆ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೂರನೇ ಸ್ಥಾನದಲ್ಲಿದ್ದಾರೆ. X ನಲ್ಲಿ ಅವರು 87 ಮಿಲಿಯನ್‌ಗಿಂತಲೂ (8 ಕೋಟಿ) ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ಇದನ್ನೂ ಓದಿ: PublicTV Explainer: ಬಜೆಟ್ ಎಂದರೇನು? ಆಯವ್ಯಯದ ಬಗ್ಗೆ ನಿಮಗೆಷ್ಟು ಗೊತ್ತು?
38 ಮಿಲಿಯನ್‌ಗೂ ಹೆಚ್ಚು ಫಾಲೋವರ್ಸ್ ಹೊಂದಿರುವ ಯುಎಸ್ ಅಧ್ಯಕ್ಷ ಜೋ ಬೈಡೆನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರ ನಂತರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಿಲರಿ ಕ್ಲಿಂಟನ್ ಇದ್ದಾರೆ.