ವಾಷಿಂಗ್ಟನ್: ಆರಂಭದಿಂದಲೂ ಟ್ವಿಟ್ಟರ್‌ನಲ್ಲಿ (Twitter) ಒಂದಿಲ್ಲೊಂದು ಬದಲಾವಣೆಯನ್ನು ತರುತ್ತಿರುವ ಟ್ವಿಟ್ಟರ್ ಮುಖ್ಯಸ್ಥ ಎಲೋನ್ ಮಸ್ಕ್ (Elon Musk), ಒಂದು ದಿನಕ್ಕೆ ಟ್ವಿಟ್ಟರ್‌ನಲ್ಲಿ ಇಂತಿಷ್ಟೇ ಪೋಸ್ಟ್‌ಗಳನ್ನ ಓದಬಹುದು ಎಂದು ಮಿತಿ ವಿಧಿಸಿದ್ದರು. ಇದೀಗ ಮತ್ತೆ ಓದುವಿಕೆ ಮಿತಿಯನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
To address extreme levels of data scraping & system manipulation, we’ve applied the following temporary limits:
– Verified accounts are limited to reading 6000 posts/day
– Unverified accounts to 600 posts/day
– New unverified accounts to 300/day
— Elon Musk (@elonmusk) July 1, 2023
Advertisement
ಶನಿವಾರ ವಿಶ್ವದಾದ್ಯಂತ ಕೆಲಕಾಲ ಟ್ವಿಟ್ಟರ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದಾಗಿ ಜನ ಅಸಮಾಧಾನ ಹೊರಹಾಕಿದ್ದರು. ಬಳಿಕ ಮಸ್ಕ್ ಬದಲಾವಣೆಯ ಅಸ್ತ್ರ ಹೂಡಿದ್ದರು. ಇದನ್ನೂ ಓದಿ: ಲಕ್ಷ, ಕೋಟಿ ಆದಾಯವಿದ್ದರೂ ಟ್ಯಾಕ್ಸ್ ಕಟ್ಟದ ಯೂಟ್ಯೂಬರ್ಸ್ – ಕೇರಳದ ಹಲವೆಡೆ ಐಟಿ ದಾಳಿ
Advertisement
Advertisement
ಅನಗತ್ಯ ಡೇಟಾ ಬಳಕೆ ಮಾಡೋದನ್ನ ತಪ್ಪಿಸುವುದು, ಕೆಲ ಪೋಸ್ಟ್‌ಗಳ (Twitter Posts) ಮೂಲಕ ಕೆರಳಿಸುವ ಯತ್ನ ಮಾಡುತ್ತಿರುವುದು ಸೇರಿದಂತೆ ಹಲವು ವಿಷಯಗಳ ಮೇಲೆ ನಿಗಾ ಇಡುವ ಉದ್ದೇಶದಿಂದ ಟ್ವಿಟ್ಟರ್ ಪ್ರತಿದಿನದ ಪೋಸ್ಟ್ ಓದಲು ಮಿತಿ ವಿಧಿಸಿತ್ತು. ಇದು ತಾತ್ಕಾಲಿಕ ಕ್ರಮವಾಗಿದೆ. ಮುಂದೆ ಟ್ವಿಟ್ಟರ್ ಬಳಕೆದಾರರ ಪ್ರತಿಕ್ರಿಯೆ ನೋಡಿಕೊಂಡು ಬದಲಾವಣೆ ತರುವ ಸಾಧ್ಯತೆಗಳಿವೆ ಎಂದು ಹೇಳಲಾಗಿತ್ತು. ಇದನ್ನೂ ಓದಿ: 3 ಟ್ರಿಲಿಯನ್ ಡಾಲರ್ ಮೌಲ್ಯದ ಕಂಪನಿಯಾಗಿ ಹೊರಹೊಮ್ಮಿದ ಆಪಲ್
Advertisement
Rate limits increasing soon to 8000 for verified, 800 for unverified & 400 for new unverified https://t.co/fuRcJLifTn
— Elon Musk (@elonmusk) July 1, 2023
ವೆರಿಫೈ ಆದ ಖಾತೆಗಳಿಗೆ (Twitter Verified Accounts) ದಿನಕ್ಕೆ 6,000 ಪೋಸ್ಟ್ ಮಾತ್ರ ಓದಲು ಅವಕಾಶವಿತ್ತು. ವೆರಿಫೈ ಆಗದ ಖಾತೆಗಳಿಗೆ ದಿನಕ್ಕೆ 600 ಹಾಗೂ ವೆರಿಫೈ ಆಗದ ಹೊಸ ಖಾತೆಗಳ ಬಳಕೆದಾರರು ದಿನಕ್ಕೆ 300 ಪೋಸ್ಟ್‌ಗಳನ್ನು ಓದಲು ಮಿತಿ ಇರುತ್ತದೆ ಎಂದು ಶನಿವಾರ ಮಸ್ಕ್ ಹೇಳಿದ್ದರು.
ಈ ಕುರಿತು ಭಾನುವಾರ ಮತ್ತೊಂದು ಟ್ವೀಟ್ ಮಾಡಿ ಓದುವಿಕೆ ಮಿತಿಯಲ್ಲಿ ಕೊಂಚ ಮಾರ್ಪಾಡು ಮಾಡುವುದಾಗಿ ಘೋಷಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ದೈನಂದಿನ ಪೋಸ್ಟ್ ಓದುವ ಮಿತಿಯನ್ನು ಹೆಚ್ಚಿಸುವುದಾಗಿ ತಿಳಿಸಿದ್ದಾರೆ. ವೆರಿಫೈ ಖಾತೆಗಳ ಮಿತಿಯನ್ನು 8,000 ಪೋಸ್ಟ್ ಮಾತ್ರ ಓದಲು ಅವಕಾಶವಿತ್ತು. ವೆರಿಫೈ ಆಗದ ಖಾತೆಗಳಿಗೆ ದಿನಕ್ಕೆ 800 ಹಾಗೂ ವೆರಿಫೈ ಆಗದ ಹೊಸ ಖಾತೆಗಳ ಮಿತಿಯನ್ನು 400 ಕ್ಕೆ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ. ಈಗ 10k, 1k ಮತ್ತು 0.5k ಎಂದು ಮಸ್ಕ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.
Web Stories