ವಾಷಿಂಗ್ಟನ್: ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ (DOGE) ಮುಖ್ಯಸ್ಥ, ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್ (Elon Musk) ತಮ್ಮ ವಿಭಾಗದ ಕಠಿಣ ಕೆಲಸದ ಸಮಯವನ್ನು ಸಮರ್ಥಿಸಿಕೊಂಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು DOGE ವಾರಕ್ಕೆ 120 ಗಂಟೆಗಳ ಕಾಲ ಕೆಲಸ ಮಾಡುತ್ತಿದೆ. ನಮ್ಮ ಅಧಿಕಾರಶಾಹಿ ವಿರೋಧಿಗಳು ವಾರಕ್ಕೆ 40 ಗಂಟೆಗಳ ಕಾಲ ಆಶಾವಾದಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಅವರು ಸೋಲುತ್ತಿದ್ದಾರೆ ಎಂದು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.
ಅಧಿಕಾರ ಸ್ವೀಕರಿಸಿದ ಮೊದಲ ಎರಡು ಎರಡು ವಾರಗಳಲ್ಲಿ ಅಮೆರಿಕದ ತೆರಿಗೆ ಡಾಲರ್ ದುರುಪಯೋಗವನ್ನು ಬಹಿರಂಗಪಡಿಸುವಲ್ಲಿ DOGE ಮಾಡಿದ ಕೆಲಸವನ್ನು ಅವರು ಶ್ಲಾಘಿಸಿದ್ದಾರೆ.
DOGE is working 120 hour a week. Our bureaucratic opponents optimistically work 40 hours a week. That is why they are losing so fast. https://t.co/dXtrL5rj1K
— Elon Musk (@elonmusk) February 2, 2025
ಅಮೆರಿಕ ಸರ್ಕಾರದ ದುಂದು ವೆಚ್ಚಗಳನ್ನು ನಿಯಂತ್ರಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು DOGE ಇಲಾಖೆಯನ್ನು ಸೃಷ್ಟಿಸಿ ಮುಖ್ಯಸ್ಥರನ್ನಾಗಿ ಎಲಾನ್ ಮಸ್ಕ್ ಅವರನ್ನು ನೇಮಿಸಿದ್ದಾರೆ.
ಮಸ್ಕ್ ಅವರು ವಾರಕ್ಕೆ 120 ಗಂಟೆ ಕೆಲಸದ ವಿಷಯವನ್ನು ಪ್ರಸ್ತಾಪಿಸುತ್ತಿದ್ದಂತೆ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ವಾರಕ್ಕೆ 120 ಗಂಟೆ ಅಂದರೆ 7 ದಿನ 17 ಗಂಟೆ ಕೆಲಸ ಮಾಡಬೇಕು. ಒಂದು ದಿನ ರಜೆ ತೆಗೆದುಕೊಂಡರೂ 20 ಗಂಟೆ ಕೆಲಸ ಮಾಡಬೇಕಾಗುತ್ತದೆ. ಇಷ್ಟೊಂದು ದೀರ್ಘ ಅವಧಿ ಕೆಲಸ ಮಾಡಲು ಸಾಧ್ಯವೇ ಎಂದು ಪ್ರಶ್ನಿಸುತ್ತಿದ್ದಾರೆ. ಇದನ್ನೂ ಓದಿ: ತನ್ನನ್ನು ಮೋದಿ ಕೈಗೊಂಬೆ ಎಂದ ಡೆಮಾಕ್ರಟಿಕ್ ಸಂಸದರ ವಿರುದ್ಧ US ಗುಪ್ತಚರ ವಿಭಾಗದ ಬಾಸ್ ಕೆಂಡಾಮಂಡಲ
ಅಮೆರಿಕ ಸರ್ಕಾರ ವಿದೇಶಗಳಿಗೆ ನೀಡುತ್ತಿರುವ USAID ಅನ್ನು ಕ್ರಿಮಿನಲ್ ಸಂಘಟನೆ ಎಂದು ಮಸ್ಕ್ ಕರೆದಿದ್ದಾರೆ. ಈ ಅನುದಾನ ನಿಜವಾಗಿಯೂ ಬಡ ದೇಶಗಳಿಗೆ ತಲುಪುತ್ತಿಲ್ಲ. ಇದು ಅಮೆರಿಕ ಸರ್ಕಾರವನ್ನು ಬೆಂಬಲಿಸುವ ಸರ್ಕಾರೇತರ ಸಂಸ್ಥೆಗಳಿಗೆ ಹೋಗುತ್ತದೆ. ಈ ಎನ್‌ಜಿಒಗಳು ಆ ಹಣವನ್ನು ಸರ್ಕಾರದಲ್ಲಿರುವವರಿಗೆ ಕಳುಹಿಸುತ್ತಾರೆ. ಅಕ್ರಮ ಹಣ ವರ್ಗಾವಣೆ ಮಾಡಲು USAID ಇದನ್ನು ಬಳಸಲಾಗುತ್ತದೆ ಎಂದು ಕಿಡಿಕಾರಿದ್ದಾರೆ.
DOGE is working 120 hour a week. Our bureaucratic opponents optimistically work 40 hours a week. That is why they are losing so fast. https://t.co/dXtrL5rj1K
— Elon Musk (@elonmusk) February 2, 2025
ನಷ್ಟದಲ್ಲಿದ್ದ ಟ್ವಿಟ್ಟರ್ (Twitter) ಕಂಪನಿಯನ್ನು ಖರೀದಿಸಿದ ಬಳಿಕ ಮಸ್ಕ್ ಮಾಡಿದ ಮೊದಲ ಕೆಲಸ ಏನೆಂದರೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು ಆರಂಭಿಸಿದ್ದರು. ಟ್ವಿಟ್ಟರ್ ಸಿಇಒ ಪರಾಗ್ ಅಗರ್‌ವಾಲ್ ಸೇರಿದಂತೆ ಬಳಿಕ 80% ಉದ್ಯೋಗಿಗಳನ್ನು ಕೆಲಸದಿಂದಲೇ ತೆಗೆದು ಹಾಕಿದ್ದನ್ನು ಮಸ್ಕ್ ಸಮರ್ಥಿಸಿಕೊಂಡಿದ್ದರು.
ನಾವು ಯಾವುದೇ ಕಾರ್ಯಕರ್ತರ ಸಂಘಟನೆಯನ್ನು ನಡೆಸುತ್ತಿಲ್ಲ. ಸೆನ್ಸರ್‌ಶಿಪ್ ಬಗ್ಗೆ ನೀವು ಹೆಚ್ಚು ಕಾಳಜಿ ವಹಿಸದಿದ್ದರೆ ಬಹಳಷ್ಟು ಜನರನ್ನು ಕೈಬಿಡಬಹುದು. ಹೀಗಾಗಿ 80% ರಷ್ಟು ಉದ್ಯೋಗವನ್ನು ಕಡಿತ (Job Cut) ಮಾಡಿದರೂ ಯಾವುದೇ ಸಮಸ್ಯೆಯಾಗಲಿಲ್ಲ ಎಂದು ಉತ್ತರಿಸಿದ್ದರು.
ಮಸ್ಕ್ ಟ್ವಿಟ್ಟರ್ ಕಂಪನಿಯನ್ನು ಖರೀದಿಸಿದಾಗ ಸುಮಾರು 8 ಸಾವಿರ ಉದ್ಯೋಗಿಗಳಿದ್ದರು. ಈಗ ಉದ್ಯೋಗಿಗಳ ಸಂಖ್ಯೆ 2 ಸಾವಿರಕ್ಕೆ ಇಳಿಕೆಯಾಗಿದ್ದು 80% ರಷ್ಟು ಮಂದಿಗೆ ಗೇಟ್‌ಪಾಸ್ ನೀಡಲಾಗಿದೆ.