ವಾಷಿಂಗ್ಟನ್: ನಾನು ವಿಶ್ವದ ಪ್ರಸಿದ್ಧ ಫುಟ್‍ಬಾಲ್ ಕ್ಲಬ್ ಮ್ಯಾಂಚೆಸ್ಟರ್ ಯುನೈಟೆಡ್ ತಂಡವನ್ನು ಖರೀದಿಸುತ್ತೇನೆ ಎಂದು ಟೆಸ್ಲಾ ಸಿಇಒ ಎಲೋನ್ ಮಸ್ಕ್ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.
Advertisement
ಸ್ಪಷ್ಟವಾಗಿ ಹೇಳಬೇಕೆಂದರೆ, ನಾನು ರಿಪಬ್ಲಿಕನ್ ಪಕ್ಷದ ಎಡ ಅರ್ಧ ಮತ್ತು ಡೆಮಾಕ್ರಟಿಕ್ ಪಕ್ಷದ ಬಲ ಅರ್ಧವನ್ನು ಬೆಂಬಲಿಸುತ್ತೇನೆ. ಜೊತೆಗೆ ನಾನು ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ಖರೀದಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿ ಎಲೋನ್ ಮಸ್ಕ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿದ್ದಾರೆ. ಇದನ್ನೂ ಓದಿ: ಫಿಫಾ ಜೊತೆ 2 ಬಾರಿ ಸಭೆ ಮಾಡಲಾಗಿದೆ: ಸುಪ್ರೀಂಗೆ ಕೇಂದ್ರ
Advertisement
Advertisement
ಮ್ಯಾಂಚೆಸ್ಟರ್ ಯುನೈಟೆಡ್ ವಿಶ್ವದ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಫುಟ್‍ಬಾಲ್ ಕ್ಲಬ್‍ಗಳಲ್ಲಿ ಒಂದಾಗಿದೆ. ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ಇಂಗ್ಲೆಂಡ್‍ನಲ್ಲಿ ನಡೆಯುವ ಯುರೋಪಿಯನ್ ಕಪ್ ಟೂರ್ನಿಯಲ್ಲಿ ದಾಖಲೆಯ 20 ಬಾರಿ ಚಾಂಪಿಯನ್ ಆಗಿದೆ. ವಿಶ್ವದ ಲೆಜೆಂಡ್ ಸ್ಟ್ರೈಕರ್‌ಗಳಲ್ಲಿ ಒಬ್ಬರಾದ ಕ್ರಿಸ್ಟಿಯಾನೋ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ಪರ ಆಡುವ ಆಟಗಾರರಾಗಿದ್ದು, ಅಮೇರಿಕನ್ ಗ್ಲೇಜರ್ ಕುಟುಂಬ ಮ್ಯಾಂಚೆಸ್ಟರ್ ಯುನೈಟೆಡ್ ತಂಡದ ಮಾಲೀಕತ್ವವನ್ನು ಹೊಂದಿದೆ. ಇದನ್ನೂ ಓದಿ: ಹರಾರೆಯಲ್ಲಿ ನೀರಿಗೆ ಹಾಹಾಕಾರ – ಮಿತವಾಗಿ ಬಳಸಿ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ
Advertisement
Also, I’m buying Manchester United ur welcome
— Elon Musk (@elonmusk) August 17, 2022
ಇದೀಗ ಮಸ್ಕ್ ನಾನು ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ಖರೀದಿಸುತ್ತೇನೆ ಎಂದ ಬಳಿಕ ಮಸ್ಕ್ ನಡೆಯ ಕುರಿತಾಗಿ ಬಾರಿ ಚರ್ಚೆ ನಡೆಯುತ್ತಿದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ಟ್ವಿಟ್ಟರ್ ಖರೀದಿಸುವುದಾಗಿ ಹೇಳಿಕೊಂಡಿದ್ದರು. ಆ ಬಳಿಕ ಈ ಖರೀದಿ ಒಪ್ಪಂದ ಮುರಿದುಬಿದ್ದಿತ್ತು.