ವಾಷಿಂಗ್ಟನ್: ಈ ವರ್ಷದ ಅಂತ್ಯಕ್ಕೆ ನಾನು ಭಾರತಕ್ಕೆ (India) ಭೇಟಿ ನೀಡುತ್ತೇನೆ ಎಂದು ವಿಶ್ವದ ಶ್ರೀಮಂತ ಉದ್ಯಮಿ, ಟೆಸ್ಲಾ ಕಂಪನಿಯ ಸಂಸ್ಥಾಪಕ ಎಲೋನ್ ಮಸ್ಕ್ (Elon Musk) ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಎಲೋನ್ ಮಸ್ಕ್ ಶುಕ್ರವಾರ ದೂರವಾಣಿಯಲ್ಲಿ ಮಾತನಾಡಿದ್ದರು. ಮಾತನಾಡಿದ ಬಳಿಕ ಮೋದಿ ಅವರು ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಭಾರತ ಮತ್ತು ಅಮೆರಿಕ ಒಡಗೂಡಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಮಸ್ಕ್, ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡುವುದು ಗೌರವದ ಸಂಗತಿ. ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
It was an honor to speak with PM Modi.
I am looking forward to visiting India later this year! https://t.co/TYUp6w5Gys
— Elon Musk (@elonmusk) April 19, 2025
ಮಸ್ಕ್ ಕಳೆದ ವರ್ಷ ಭಾರತಕ್ಕೆ ಬರುವುದಾಗಿ ತಿಳಿಸಿದ್ದರು. ಆದರೆ ಮಸ್ಕ್ ಭಾರತಕ್ಕೆ ಬಾರದೇ ಚೀನಾಗೆ ಭೇಟಿ ನೀಡಿ ಉದ್ಯಮ ಸಂಬಂಧ ಮಾತುಕತೆ ನಡೆಸಿದ್ದರು. ಪೀಪಲ್ ರಿಪಬ್ಲಿಕ್ ಆಫ್ ಚೀನಾದ ಪ್ರೀಮಿಯರ್ ಲಿ ಕಿಯಾಂಗ್ ಅವರನ್ನು ಮಸ್ಕ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದನ್ನೂ ಓದಿ: Public TV Explainer: ಭಾರತಕ್ಕೆ ಎಂಟ್ರಿ ಕೊಡಲಿದೆ ಸ್ಟಾರ್‌ಲಿಂಕ್: ಸಿಗುತ್ತಾ ಕೇಬಲ್, ಟವರ್ ರಹಿತ ಹೈಸ್ಪೀಡ್ ಇಂಟರ್ನೆಟ್? – ದರ ಎಷ್ಟು?
Honored to meet with Premier Li Qiang.
We have known each other now for many years, since early Shanghai days. pic.twitter.com/JCnv6MbZ6W
— Elon Musk (@elonmusk) April 28, 2024
ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಅಧ್ಯಕ್ಷರಾದ ಬಳಿಕ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಈ ಪ್ರವಾಸದ ಸಮಯದಲ್ಲಿ ಮೋದಿ ಅವರು ಮಸ್ಕ್ ಅವರನ್ನು ಭೇಟಿಯಾಗಿದ್ದರು.
2023 ರಲ್ಲಿ ಮೋದಿ ಅವರ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಮಸ್ಕ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಸ್ಕ್, ನಾನು ಭಾರತದ (India) ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿ ಎಂದು ಹೇಳಿದ್ದರು.
ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದಿದ್ದರು.
2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ ಮಾಡುವಂತೆ ಮಸ್ಕ್ ಬಳಿ ಮನವಿ ಮಾಡಿದ್ದರು. ಇದಾದ ಬಳಿಕ 2016ರಲ್ಲೇ ಟೆಸ್ಲಾ ಭಾರತಕ್ಕೆ ಬರುವುದಾಗಿ ಹೇಳಿತ್ತು. 2020ರ ಅಕ್ಟೋಬರ್‌ನಲ್ಲಿ ಟೆಸ್ಲಾದ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಕಂಪನಿಯು 2021ಕ್ಕೆ ಭಾರತಕ್ಕೆ ಕಾಲಿಡಲಿದೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರ ಮತ್ತು ಟೆಸ್ಲಾ ಕಂಪನಿ ಜೊತೆ ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿದ್ದ ಕಾರಣ ಭಾರತದಲ್ಲಿ ಇನ್ನೂ ಟೆಸ್ಲಾ ಕಾರು ಬಿಡುಗಡೆಯಾಗಿಲ್ಲ.