ವಾಷಿಂಗ್ಟನ್: ಟೆಸ್ಲಾ ಕಂಪನಿಯ ಸಿಇಒ ಎಲೋನ್ ಮಸ್ಕ್ ತನ್ನ ಕಂಪನಿಯ ಶೇ.10 ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಬೇಕು ಎಂದು ತಿಳಿಸಿರುವುದಾಗಿ ವರದಿಯಾಗಿದೆ.
ವಿಶ್ವದ ಶ್ರೀಮಂತ ತನ್ನ ಕಂಪನಿಯ ಆಂತರಿಕ ಮೇಲ್ ಒಂದರಲ್ಲಿ ತಾವು ಪ್ರಸ್ತುತ ಕೆಟ್ಟ ಮನಸ್ಥಿತಿಯಲ್ಲಿರುವುದಾಗಿ ಹೇಳಿ, ತಮ್ಮ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿಯಿಂದ ಶೇ.10 ರಷ್ಟು ಸಿಬ್ಬಂದಿಯನ್ನು ಕಡಿತಗೊಳಿಸಬೇಕಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: 14 ವರ್ಷ ಕಾರ್ಯನಿರ್ವಹಿಸಿ ಶೆರಿಲ್ ಸ್ಯಾಂಡ್‌ಬರ್ಗ್ ಮೆಟಾ ಸಿಒಒ ಹುದ್ದೆಗೆ ರಾಜೀನಾಮೆ
Advertisement
Advertisement
ಮಸ್ಕ್ ಗುರುವಾರ ಟೆಸ್ಲಾ ಉದ್ಯೋಗಿಗಳಿಗೆ ಕಳುಹಿಸಿದ ಮೇಲ್‌ನಲ್ಲಿ ಕಂಪನಿಗೆ ವಿಶ್ವದ ಎಲ್ಲಾ ಕಡೆಗಳಿಂದಲೂ ಹೊಸ ನೇಮಕಾತಿಗೆ ವಿರಾಮ ನೀಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
Advertisement
ವಾರದ ಆರಂಭದಲ್ಲಿ ಎಲೋನ್ ಮಸ್ಕ್ ಟೆಸ್ಲಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಬಿಟ್ಟು, ಕಂಪನಿಗೆ ಮರಳುವಂತೆ ಕಟ್ಟುನಿಟ್ಟಾಗಿ ಆದೇಶಿಸಿದ್ದರು. ಉದ್ಯೋಗಿಗಳು ಕಂಪನಿಗೆ ಮರಳಲು ಬಯಸದೇ ಹೋದರೆ, ಶಾಶ್ವತವಾಗಿ ಸಂಸ್ಥೆಯನ್ನೇ ತೊರೆಯಬಹುದು ಎಂದಿದ್ದರು. ಇದನ್ನೂ ಓದಿ: ಕಚೇರಿಯಿಂದ್ಲೇ ಕೆಲಸ ಮಾಡಿ, ಇಲ್ಲವೇ ಬಿಟ್ಟುಬಿಡಿ- ಟೆಸ್ಲಾ ಉದ್ಯೋಗಿಗಳಿಗೆ ಮಸ್ಕ್ ವಾರ್ನಿಂಗ್
Advertisement
ಟೆಸ್ಲಾ ಕಂಪನಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ವಾರಕ್ಕೆ ಕನಿಷ್ಠ 40 ಗಂಟೆಗಳ ಕಾಲ ಕಚೇರಿಯಲ್ಲಿಯೇ ಇರಬೇಕು. ಇನ್ನು ಮುಂದೆ ಮನೆಯಿಂದ ಕೆಲಸ ಮಾಡುವುದು ಸ್ವೀಕಾರ್ಹವಲ್ಲ. ಒಂದು ವೇಳೆ ಉದ್ಯೋಗಿಗಳು ಕಂಪನಿಗೆ ಹಾಜರಾಗದೇ ಹೋದರೆ, ಕೆಲಸವನ್ನೇ ತೊರೆದಿರುವುದಾಗಿ ಪರಿಗಣಿಸಲಾಗುವುದು ಎಂದು ಇ-ಮೇಲ್‌ನಲ್ಲಿ ಖಡಕ್ ಎಚ್ಚರಿಕೆ ನೀಡಿದ್ದರು.