ನಮ್ಮದು ವೈಭವೀಕರಿಸಿದ ಕಾರ್ಯಕರ್ತರ ಸಂಘಟನೆಯಲ್ಲ: ಟ್ವಿಟ್ಟರ್‌ 6 ಸಾವಿರ ಉದ್ಯೋಗ ಕಡಿತಕ್ಕೆ ಮಸ್ಕ್‌ ಸ್ಪಷ್ಟನೆ

Public TV
1 Min Read
Elon Musk 1

ವಾಷಿಂಗ್ಟನ್‌: ನಾವು ವೈಭವೀಕರಿಸಿದ ಕಾರ್ಯಕರ್ತರ ಸಂಘಟನೆಯನ್ನು ನಡೆಸುತ್ತಿಲ್ಲ. ಹೀಗಾಗಿ ಶೇ.80 ರಷ್ಟು ಉದ್ಯೋಗಿಗಳನ್ನು ತೆಗೆದರೂ ಕಂಪನಿ ಸರಿಯಾಗಿ ಕೆಲಸ ಮಾಡುತ್ತಿದೆ ಎಂದು ಟ್ವಿಟ್ಟರ್‌ (Twitter) ಮುಖ್ಯಸ್ಥ ಎಲೋನ್‌ ಮಸ್ಕ್‌ (Elon Musk) ಹೇಳಿದ್ದಾರೆ.

ಅಮೆರಿಕದ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಶೇ.20ರಷ್ಟು ಉದ್ಯೋಗಿಗಳನ್ನು ಇಟ್ಟುಕೊಂಡು ಸಂಸ್ಥೆಯನ್ನು ನಡೆಸುವುದಕ್ಕೆ ಕಷ್ಟವಾಗಿಲ್ಲವೇ ಎಂದು ಪ್ರಶ್ನೆ ಕೇಳಲಾಯಿತು. ಇದಕ್ಕೆ ಮಸ್ಕ್‌, ನೀವು ವೈಭವೀಕರಿಸಿದ ಕಾರ್ಯಕರ್ತ ಸಂಘಟನೆಯನ್ನು ನಡೆಸಲು ಪ್ರಯತ್ನಿಸದಿದ್ದರೆ ಮತ್ತು ಸೆನ್ಸರ್‌ಶಿಪ್‌ ಬಗ್ಗೆ ನೀವು ಹೆಚ್ಚು ಕಾಳಜಿ ವಹಿಸದಿದ್ದರೆ ಬಹಳಷ್ಟು ಜನರನ್ನು ಕೈಬಿಡಬಹುದು. ಹೀಗಾಗಿ ಶೇ.80 ರಷ್ಟು ಉದ್ಯೋಗವನ್ನು ಕಡಿತ (Job Cut) ಮಾಡಿದರೂ ಯಾವುದೇ ಸಮಸ್ಯೆಯಾಗಲಿಲ್ಲ ಎಂದು ಉತ್ತರಿಸಿದರು. ಇದನ್ನೂ ಓದಿ: ಭಾರತದ ಮೊದಲ ಆ್ಯಪಲ್ ಸ್ಟೋರ್ ಮುಂಬೈನಲ್ಲಿ ಉದ್ಘಾಟನೆ – ಗ್ರಾಹಕರಿಗೆ ಅನುಕೂಲಗಳೇನಿದೆ?

ಸಾಧ್ಯವಾದಷ್ಟು ನ್ಯಾಯಯುತ ಮತ್ತು ಪಕ್ಷಪಾತವಿಲ್ಲದೇ ಕೆಲಸ ಮಾಡುವುದು ಹೊಸ ಟ್ವಿಟ್ಟರ್‌ನ ಗುರಿ. ಈ ಕಾರಣಕ್ಕೆ ನಾವು ಯಾವುದೇ ರಾಜಕೀಯ ಸಿದ್ಧಾಂತಕ್ಕೆ ಒಲವು ತೋರುವುದಿಲ್ಲ ಎಂದರು. ಇದನ್ನೂ ಓದಿ: ಹಾರಾಟಕ್ಕೆ ಕೆಲವೇ ಕ್ಷಣಗಳಿದ್ದಾಗ ವಿಶ್ವದ ಅತಿ ದೊಡ್ಡ ಸ್ಟಾರ್‌ಶಿಪ್ ರಾಕೆಟ್ ಪರೀಕ್ಷೆ ರದ್ದು

ಮಸ್ಕ್‌ ಟ್ವಿಟ್ಟರ್‌ ಕಂಪನಿಯನ್ನು ಖರೀದಿಸಿದಾಗ ಸುಮಾರು 8 ಸಾವಿರ ಉದ್ಯೋಗಿಗಳಿದ್ದರು. ಈಗ ಉದ್ಯೋಗಿಗಳ ಸಂಖ್ಯೆ 2 ಸಾವಿರಕ್ಕೆ ಇಳಿಕೆಯಾಗಿದ್ದು ಶೇ.80ರಷ್ಟು ಮಂದಿಗೆ ಗೇಟ್‌ಪಾಸ್‌ ನೀಡಲಾಗಿದೆ.

 

ನಷ್ಟದಲ್ಲಿರುವ ಕಂಪನಿಯನ್ನು ಮೇಲಕ್ಕೆ ಎತ್ತಲೂ ಉದ್ಯೋಗ ಕಡಿತ ಅನಿವಾರ್ಯ. ಇಲ್ಲದೇ ಇದ್ದರೆ ಕಂಪನಿಯೇ ಮುಳಗಬಹುದು ಎಂದು ಮಸ್ಕ್‌ ತಮ್ಮ ನಿರ್ಧಾರವನ್ನು ಹಿಂದೆ ಸಮರ್ಥಿಸಿಕೊಂಡಿದ್ದರು.

ಟ್ವಿಟ್ಟರ್‌ ಎಡಚಿಂತನೆಯನ್ನು ಬಲವಾಗಿ ಬೆಂಬಲಿಸುತ್ತದೆ. ನಾನು ಇಲ್ಲಿಯವರೆಗೆ ಡೆಮಾಕ್ರೆಟಿಕ್‌ ಬೆಂಬಲಿಸುತ್ತಿದ್ದೆ ವೋಟು ಹಾಕುತ್ತಿದ್ದೆ. ಆದರೆ ಇನ್ನು ಮುಂದೆ ನಾನು ಡೆಮಾಕ್ರೆಟಿಕ್‌ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ. ರಿಪಬ್ಲಿಕ್‌ಗೆ ಬೆಂಬಲ ನೀಡುತ್ತೇನೆ ಎಂದು ತಿಳಿಸಿದ್ದರು.

Share This Article