ವಾಷಿಂಗ್ಟನ್: ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್(Elon Musk) ಟ್ವಿಟ್ಟರ್ ಕಂಪನಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಸಿಇಒ ಪರಾಗ್ ಅಗರ್‌ವಾಲ್ ಮತ್ತು ಅದರ ಉನ್ನತ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ.
ಟ್ವಿಟರ್(Twitter) ಸಿಇಒ ಪರಾಗ್ ಅಗರ್‌ವಾಲ್(Parag Agarwal) ಜೊತೆ ಕಾನೂನು, ನೀತಿ ಮತ್ತು ಟ್ರಸ್ಟ್ ಮುಖ್ಯಸ್ಥರಾದ ವಿಜಯ ಗದ್ದೆ, ಮುಖ್ಯ ಹಣಕಾಸು ಅಧಿಕಾರಿ ನೆಡ್ ಸೆಗಲ್ ಸೇರಿದಂತೆ ಪ್ರಮುಖರನ್ನು ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.
Advertisement
the bird is freed
— Elon Musk (@elonmusk) October 28, 2022
Advertisement
ಕಂಪನಿಯ ಸಿಇಒ ಜಾಕ್ ಡೋರ್ಸೆ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತೀಯ ಮೂಲದ ಪರಾಗ್ ಅಗರ್‌ವಾಲ್ ಕಂಪನಿಯ ಸಿಇಒ ಸ್ಥಾನವನ್ನು ಅಲಂಕರಿಸಿದ್ದರು. ಇದನ್ನೂ ಓದಿ: ಹೌದು, ನಾವು ಎಡಪಂಥೀಯ ಚಿಂತನೆಗಳನ್ನು ಬೆಂಬಲಿಸುತ್ತವೆ – ಟ್ವಿಟ್ಟರ್ ಉದ್ಯೋಗಿಯ ವೀಡಿಯೋ ವೈರಲ್
Advertisement
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರನ್ನು ಟ್ವಿಟ್ಟರ್‌ನಿಂದ ಶಾಶ್ವತವಾಗಿ ಗೇಟ್‌ಪಾಸ್ ನೀಡುವ ಸಂಬಂಧ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಜಯ ಗದ್ದೆ ಪ್ರಮುಖ ಪಾತ್ರವನ್ನು ವಹಿಸಿದ್ದರು.
Advertisement
ಟ್ವಿಟ್ಟರ್ ಕಂಪನಿ ತಮ್ಮ ತೆಕ್ಕೆ ಬಂದ ಬೆನ್ನಲ್ಲೇ ಮಸ್ಕ್ ಹಕ್ಕಿ ಈಗ ಮುಕ್ತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮಸ್ಕ್ ಅವರು ಕಳೆದ ಏಪ್ರಿಲ್‌ನಲ್ಲಿ ಟ್ವಿಟ್ಟರ್’ ಕಂಪನಿಯನ್ನು 44 ಬಿಲಿಯನ್ ಡಾಲರ್ (ಸುಮಾರು 3.36 ಲಕ್ಷ ಕೋಟಿ ರೂ.) ಮೊತ್ತಕ್ಕೆ ಖರೀದಿಸಲು ಮುಂದಾಗಿದ್ದರು. ಅದಕ್ಕೆ ಅಗತ್ಯವಿರುವ ಹಣ ಸಂಗ್ರಹಿಸಲು ಟೆಸ್ಲಾ ಕಂಪನಿಯ 52.3 ಲಕ್ಷ ಷೇರುಗಳನ್ನು ಮಾರಾಟ ಮಾಡಿದ್ದರು. ಇದನ್ನೂ ಓದಿ: ಪತ್ರಿಕಾ ಅಂಕಣದಿಂದಾಗಿ ಟ್ವಿಟ್ಟರ್ ಕಂಪನಿ ಖರೀದಿಗೆ ಮುಂದಾದ್ರಾ ಮಸ್ಕ್?
ನಿತ್ಯದ ಟ್ವಿಟ್ಟರ್ ಬಳಕೆದಾರರ ಪೈಕಿ ಶೇ.5 ಕ್ಕಿಂತ ಕಡಿಮೆ ನಕಲಿ ಅಥವಾ ಸ್ಪ್ಯಾಮ್ ಖಾತೆಗಳಿರುವುದಾಗಿ ಟ್ವಿಟ್ಟರ್ ಈ ಹಿಂದೆ ಹೇಳಿತ್ತು. ಮೊದಲ ತ್ರೈಮಾಸಿಕದಲ್ಲಿ ಕಂಪನಿಯು 22.9 ಕೋಟಿ ಬಳಕೆದಾರರಿಗೆ ಜಾಹೀರಾತು ಸೇವೆ ಒದಗಿಸಿತ್ತು. ಆದರೆ ಸ್ಪ್ಯಾಮ್ ಬಾಟ್ಸ್ (ನಕಲಿ ಖಾತೆಗಳ ಮೂಲಕ ಟ್ವೀಟ್‌ಗಳನ್ನು ಹಂಚುವ ತಾಂತ್ರಿಕ ವ್ಯವಸ್ಥೆ)ಯನ್ನು ಮೊದಲು ತೆರವುಗೊಳಿಸುವಂತೆ ಮಸ್ಕ್ ಬೇಡಿಕೆ ಇಟ್ಟಿದ್ದರು. ತನ್ನ ಬೇಡಿಕೆಗೆ ಸರಿಯಾದ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಮಸ್ಕ್ ಟ್ವಿಟ್ಟರ್ ಖರೀದಿ ಪ್ರಕ್ರಿಯೆಯನ್ನೇ ರದ್ದು ಮಾಡಿದ್ದರು.
ಮಸ್ಕ್ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿದ ಬೆನ್ನಲ್ಲೇ ಟ್ವಿಟ್ಟರ್ ಷೇರು ಮೌಲ್ಯ ಭಾರೀ ಕುಸಿತ ಕಂಡಿತ್ತು. ಒಪ್ಪಂದದ ನಿಯಮಗಳ ಪ್ರಕಾರ ಎಲೋನ್ ಮಸ್ಕ್ ವಹಿವಾಟನ್ನು ಪೂರ್ಣಗೊಳಿಸದಿದ್ದರೆ 1 ಶತಕೋಟಿ ಡಾಲರ್ ಬ್ರೇಕಪ್ ಶುಲ್ಕವನ್ನು ಪಾವತಿಸಬೇಕಾಗಿತ್ತು. ಈ ಬ್ರೇಕಪ್ ಶುಲ್ಕ ಪಾವತಿಸುವ ಸಂಬಂಧ ಟ್ವಿಟ್ಟರ್ ಈಗ ಕೋರ್ಟ್ ಮೊರೆ ಹೋಗಿತ್ತು. ಅಷ್ಟೇ ಅಲ್ಲದೇ ಟ್ವಿಟ್ಟರ್ ಷೇರು ಮೌಲ್ಯ ಕಡಿಮೆಯಾಗಲು ಮಸ್ಕ್ ನಿರ್ಧಾರವೇ ಕಾರಣ ಎಂದು ಆರೋಪಿಸಿತ್ತು. ಈ ಎಲ್ಲಾ ಬೆಳವಣಿಗೆಯ ಮಧ್ಯೆ ಮಸ್ಕ್ ಅವರು ತಮ್ಮ ನಿರ್ಧಾರವನ್ನು ಬದಲಾಯಿಸಿ ಟ್ವಿಟ್ಟರ್ ಕಂಪನಿಯನ್ನು ಖರೀದಿಸಿದ್ದಾರೆ.