ವಾಷಿಂಗ್ಟನ್: ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮತ್ತು ಟ್ವಿಟ್ಟರ್ ನಡುವಿನ ವಿವಾದ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ನಕಲಿ ಖಾತೆಗಳ ಬಗ್ಗೆ ಅಧಿಕೃತ ಮಾಹಿತಿ ನೀಡದ್ದಕ್ಕೆ ಮಸ್ಕ್ ಟ್ವಿಟ್ಟರ್ ಖರೀದಿ ಪ್ರಕ್ರಿಯೆಯನ್ನೇ ರದ್ದು ಮಾಡಿದ್ದಾರೆ.
Advertisement
ಈಗ ಬಂದಿರುವ ಹೊಸ ಸುದ್ದಿಗಳ ಪ್ರಕಾರ ಈ ಡೀಲ್ ರದ್ದು ಮಾಡುವ ಮೊದಲೇ ಮಸ್ಕ್ ಟ್ವಿಟ್ಟರ್ ಸಿಇಒ ಪರಾಗ್ ಅಗರವಾಲ್ ಮಸ್ಕ್ ಸಂದೇಶ ಕಳುಹಿಸಿದ್ದರು. ಜೂನ್ 28 ರಂದೇ ಮಸ್ಕ್ ಪರಾಗ್ ಅಗರವಾಲ್ ಅವರಿಗೆ ಮೆಸೇಜ್ ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಟ್ವಿಟ್ಟರ್ ಖರೀದಿ ಪ್ರಕ್ರಿಯೆಯನ್ನೇ ರದ್ದುಗೊಳಿಸಿದ ಮಸ್ಕ್
Advertisement
Advertisement
ಟ್ವಿಟ್ಟರ್ ಸಿಇಒ ಪರಾಗ್ ಅಗರವಾಲ್ ಅವರಿಗೆ ಟ್ವಿಟ್ಟರ್ ವಕೀಲರ ಬಗ್ಗೆ ಬರೆದು ಒಂದು ಪತ್ರವನ್ನು ಕಳುಹಿಸಿದ್ದಾರೆ. ಈ ಪತ್ರದಲ್ಲಿ ಮಸ್ಕ್, ಹಣಕಾಸಿನ ವಿವರಗಳ ಬಗ್ಗೆ ಮಾಹಿತಿ ಕೇಳಿದ ನಂತರ ಟ್ವಿಟ್ಟರ್ ವಕೀಲರು ನಮಗೆ ತೊಂದರೆ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದರು.
Advertisement
ನಿಮ್ಮ ವಕೀಲರು ಕೆಲವು ಸಂಭಾಷಣೆಗಳನ್ನು ಇಟ್ಟುಕೊಂಡು ನಮಗೆ ತೊಂದರೆ ಉಂಟುಮಾಡಲು ಬಯಸುತ್ತಿದ್ದಾರೆ. ಅದನ್ನು ನಿಲ್ಲಿಸುವುದು ಅಗತ್ಯವಿದೆ ಎಂದು ಬರೆದು ಕಳುಹಿಸಿದ್ದಾರೆ. ಇದನ್ನೂ ಓದಿ: 100ಕ್ಕೂ ಹೆಚ್ಚು ಟ್ವಿಟ್ಟರ್ ಎಚ್‌ಆರ್ ಉದ್ಯೋಗಿಗಳು ವಜಾ
ಮಸ್ಕ್ ಅವರು ಸಾಮಾಜಿಕ ಮಾಧ್ಯಮ `ಟ್ವಿಟ್ಟರ್’ ಕಂಪನಿಯನ್ನು 44 ಬಿಲಿಯನ್ ಡಾಲರ್(55,14,78,840) ಮೊತ್ತಕ್ಕೆ ಖರೀದಿಸಲು ಮುಂದಾಗಿದ್ದರು. ಆದರೆ ಅದರಿಂದ ಹಿಂದೆ ಸರಿಯಲು ನಿರ್ಧರಿಸಿದ ನಂತರ ಟ್ವಿಟ್ಟರ್, ಮಸ್ಕ್ ವಿರುದ್ಧ ಮೊಕದ್ದಮೆ ಹೂಡಿದೆ.