ಬೆಂಗಳೂರು: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳನ್ನು (EVM) ಹ್ಯಾಕ್ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಹೇಳಿಕೆಯನ್ನು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಸಿದ್ದಾರೆ.
ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣ!
ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್ ಮಸ್ಕ್ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್ ಅವರ ಹೇಳಿಕೆಗೂ ತಾಳೆಯಾಗುತ್ತಿದೆ.…
— DK Shivakumar (@DKShivakumar) June 17, 2024
ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಅನುಮಾನ ವ್ಯಕ್ತಪಡಿಸಿದ ಅವರು, ʻಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣ, ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್ ಮಸ್ಕ್ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಡಿಕೆಶಿ ಎಕ್ಸ್ ಖಾತೆಯಲ್ಲಿ ಏನಿದೇ?
ʻಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣ!
ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್ ಮಸ್ಕ್ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ.
ಎಲಾನ್ ಮಸ್ಕ್ ಹೇಳಿದ್ದೇನು?
ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್ ಮಸ್ಕ್ ಅವರು ಅನುಮಾನ ವ್ಯಕ್ತಪಡಿಸಿದ್ದರು. ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ ಎಂದು ಮಸ್ಕ್ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.