ಸದಾ ವಿವಾದಗಳಿಂದಲೇ ಸುದ್ದಿಯಾಗುವ ಹಿಂದಿ ಬಿಗ್ ಬಾಸ್ ಒಟಿಟಿ 2 ವಿನ್ನರ್ (Bigg Boss Hindi Ott 2) ಎಲ್ವಿಶ್ ಯಾದವ್ (Elvish Yadav) ಇದೀಗ ಅರೆಸ್ಟ್ ಆಗಿದ್ದಾರೆ. ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಎಲ್ವಿಶ್‌ರನ್ನು ಬಂಧಿಸಿದ್ದಾರೆ. ಇಂದು ಕೋರ್ಟ್‌ಗೆ ಎಲ್ವಿಶ್‌ರನ್ನು ಹಾಜರಿಪಡಿಸುವ ಬಗ್ಗೆ ನೋಯ್ಡಾ ಡಿಸಿಪಿ ವಿದ್ಯಾಸಾಗರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಬೆಂಗಳೂರಿನಲ್ಲಿಯೇ ಚೊಚ್ಚಲ ಮಗುವಿಗೆ ಜನ್ಮ ನೀಡಲಿದ್ದಾರೆ ದೀಪಿಕಾ ಪಡುಕೋಣೆ

ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು, ಎಲ್ವಿಶ್ ಯಾದವ್ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಪಾರ್ಟಿಗಳಲ್ಲಿ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

