ಬೆಂಗಳೂರು: ದರ್ಶನ್ ವಿಚಾರದಲ್ಲಿ ಗೃಹ ಇಲಾಖೆಗೆ ಮತ್ತೆ ಮತ್ತೆ ಮುಖಭಂಗ ಆಗುತ್ತಿರುವ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ (Home Minister Parameshwar) ಮುಜುಗರಕ್ಕೆ ಒಳಗಾಗಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ದರ್ಶನ್ (Actor Darshan) ಐಷಾರಾಮಿ ರಾಜಾತಿಥ್ಯ ಪ್ರಕರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ (CM) ಸೂಚನೆ ನೀಡಿರುವ ವಿಚಾರವಾಗಿ ಪ್ರಶ್ನೆ ಕೇಳಿದ್ದಕ್ಕೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು. ಈ ರೀತಿ ಬಂದು ಪ್ರಶ್ನೆ ಕೇಳಿದರೆ ನಾನು ಮಾತಾಡಲ್ಲ ಎಂದು ಗರಂ ಆಗಿ ಉತ್ತರಿಸಿದ್ದಾರೆ.ಇದನ್ನೂ ಓದಿ: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಲೋಪ ಆಗಿರೋದು ಸತ್ಯ: ರಾಮಲಿಂಗಾರೆಡ್ಡಿ
Advertisement
Advertisement
ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (ADGP Alok Mohan), ಗೃಹ ಇಲಾಖೆ ಕಾರ್ಯದರ್ಶಿ ಉಮಾಶಂಕರ್ ಜೊತೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಸಭೆ ನಡೆಸಿದ್ದಾರೆ. ಜೈಲಿನಲ್ಲಿರುವ ಲೋಪದೋಷಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಚರ್ಚೆ ನಡೆಸಿದ್ದಾರೆ.
Advertisement
Advertisement
ಚುಟುಕು ಸಭೆ ನಡೆಸಿದ ಬಳಿಕ ವಿಧಾನಸೌಧದಿಂದ ಹೊರಟ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ನೇರವಾಗಿ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿದರು.ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು : ದರ್ಶನ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ