ಬೆಳಗಾವಿ: ಮಹಿಳೆಯರ ಸಮಾನತೆಗಾಗಿ ಹೋರಾಡಿದ ಬುದ್ಧ ಬಸವ ಅಂಬೇಡ್ಕರ್ ಮತ್ತು ಸಾವಿತ್ರಿ ಬಾಯಿ ಫುಲೆ ಅವರ ಸಿದ್ಧಾಂತ ಮತ್ತು ಆದರ್ಶಗಳನ್ನು ತಮ್ಮ ಜೀವನದಲ್ಲಿ ಯುವ ಜನಾಂಗ ಅಳವಡಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ.
Advertisement
ಘಟಪ್ರಭಾದ ಸೇವಾದಳದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆಯುತ್ತಿರುವ ಸೈನಿಕ ಮತ್ತು ಪೊಲೀಸ್ ಕಾನ್‍ಸ್ಟೇಬಲ್ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಮಹಿಳಾ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮೂಢನಂಬಿಕೆಗಳ ಸುಳಿವಿನಲ್ಲಿ ಸಿಲುಕಿ ನರಳುತ್ತಿದ್ದ ಮಹಿಳೆಯರ ಹಕ್ಕು ಮತ್ತು ಸಮಾನತೆಗಾಗಿ ಬಸವಣ್ಣನವರು 12ನೇ ಶತಮಾನದಲ್ಲಿ ಕ್ರಾಂತಿಯನ್ನು ನಡೆಸಿದ್ದರು. ಇದನ್ನೂ ಓದಿ : ಕಳಪೆ ಪ್ರದರ್ಶನದ ನಂತರವೂ ಗಾಂಧಿ ಕುಟುಂಬಕ್ಕೆ ಸೀಮಿತವಾಯ್ತು ಪಕ್ಷ: ಸುಶೀಲ್ ಮೋದಿ ವಾಗ್ದಾಳಿ
Advertisement
Advertisement
ಭಾರತದ ಪ್ರಥಮ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಹೋರಾಟದಿಂದ ಶಿಕ್ಷಣ ವಂಚಿತರಾಗಿದ್ದ ಮಹಿಳೆಯರು ಶಾಲೆಗಳ ಮೆಟ್ಟಿಲೇರಿದ್ದರು. ತದನಂತರ ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳನ್ನು ಸಂವಿಧಾನದ ಮೂಲಕ ಜಾರಿಗೊಳಿಸಿ ಅವರಿಗೆ ದೇಶದಲ್ಲಿ ಸಮಾನತೆಯ ಹಕ್ಕುಗಳನ್ನು ಕೊಡಿಸಿದರು. ಭಾರತದಲ್ಲಿ ಮೂಢನಂಬಿಕೆಗಳಿಂದಲೇ ಮಹಿಳೆಯರು ಇನ್ನೂ ಸಂಪೂರ್ಣವಾಗಿ ಮುನ್ನೆಲೆಗೆ ಬರುತ್ತಿಲ್ಲ. ಮಹಿಳೆಯರ ಸಮಾನತೆಗಾಗಿ ಹೋರಾಡಿದ ಬುದ್ಧ, ಬಸವ ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ ಅಂತಹ ಮಹಾನ್ ಪುರುಷರ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಸಿಕೊಂಡು ಸಮಾನತೆಯಿಂದ ಜೀವನ ಸಾಗಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್