Connect with us

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‍ನಿಂದ ತುರ್ತು ಬುಲಾವ್

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‍ನಿಂದ ತುರ್ತು ಬುಲಾವ್

ಬೆಂಗಳೂರು: ಹೈಕಮಾಂಡ್‍ನಿಂದ ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ.

ಇಂದು ರಾತ್ರಿ 8 ಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತುರ್ತು ಸಭೆ ಕರೆದಿದ್ದಾರೆ. ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ ಕುಮಾರ್ ಮತ್ತು ಸದಾನಂದಗೌಡ ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ವಿಧಾಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್‍ಮ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರು ದೆಹಲಿಗೆ ದೌಡಾಯಿಸಿದ್ದಾರೆ. ಇವರ ಜೊತೆಗೆ ಮಾಜಿ ಡಿಸಿಎಂ ಆರ್. ಅಶೋಕ್ ದೆಹಲಿಗೆ ತೆರಳಿದ್ದಾರೆ.

ಫೆಬ್ರುವರಿ 4 ರಂದು ನಡೆಯುವ ಪರಿವರ್ತನಾ ಯಾತ್ರೆಯ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಂದ ಅಚ್ಚರಿ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ರಾಜ್ಯ ನಾಯಕರ ಜೊತೆ ಪೂರ್ವಭಾವಿ ಸಭೆ ನಡೆಸಲು ರಾಜ್ಯ ನಾಯಕರನ್ನು ದೆಹಲಿಗೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement
Advertisement