ಬೆಂಗಳೂರು: ಇಸ್ರೋ (ISRO) ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ (Krishnaswamy Kasturirangan) ಅವರಿಗೆ ಹೃದಯಾಘಾತವಾಗಿದೆ.
ಶ್ರೀಲಂಕಾದ ಕೊಲಂಬೋಗೆ (Colombo SriLanka) ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಚರ್ಚಿಸಿ ತೀರ್ಮಾನ: ಮಧು ಬಂಗಾರಪ್ಪ
ಇಂದು ಸಂಜೆ 5.30ರ ಸುಮಾರಿಗೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ (HAL Airport Bengaluru) ಕರೆತಂದು ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಿದ್ದಾರೆ. ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ಕಸ್ತೂರಿ ರಂಗನ್ ಅವರಿಗೆ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.
ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಮತ್ತು ಪದ್ಮ ಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
Web Stories