ಬೆಂಗಳೂರು: ಮದ್ದೂರಿನಲ್ಲಿ ಇಂದು ಹಾಡಹಗಲೇ ನಡೆದಿರುವ ಕೊಲೆ ಪ್ರಕರಣ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಘಾತವಾಗಿದೆ ಎಂದು ತಿಳಿಸಿದ್ದಾರೆ.
ಕೊಲೆಯಾದ ಪ್ರಕಾಶ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಕಾನೂನು ಪ್ರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಈ ಪ್ರಕರಣ ಕುರಿತು ಮಾಹಿತಿ ಪಡೆಯುವ ಸಂದರ್ಭದಲ್ಲಿ ಬಳಸಿದ ಪದ ಭಾವನಾತ್ಮಕ ಪ್ರತಿಕ್ರಿಯೆಯೇ ಹೊರತು, ಆದೇಶವಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿ ಸ್ಪಷ್ಟ ಪಡಿಸಿದ್ದಾರೆ.
Advertisement
Advertisement
ಸಿಎಂ ಹೇಳಿದ್ದೇನು?
ವಿಜಯಪುರ ಹೆಲಿಪ್ಯಾಡ್ ನಲ್ಲಿ ಇಳಿದ ಕೂಡಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಂತಕರನ್ನು ಶೂಟೌಟ್ ಮಾಡಿ ಎಂದು ಆದೇಶಿಸಿದ್ದರು.
Advertisement
ಈ ಕುರಿತು ದೂರವಾಣಿ ಮೂಲಕ ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ ಅವರು, ನಿಜಕ್ಕೂ ನನಗೆ ಯಾವ ವಿಚಾರಕ್ಕೆ ಕೊಲೆ ನಡೆದಿದೆ ಎಂಬುದು ತಿಳಿಯುತ್ತಿಲ್ಲ. ಕೊಲೆಯಾದ ವ್ಯಕ್ತಿ ತುಂಬಾ ಒಳ್ಳೆಯ ಮನುಷ್ಯನಾಗಿದ್ದ. ಈ ಹಿಂದೆಯೂ ಎರಡು ಕೊಲೆಗಳು ನಡೆದಿವೆ ಎನ್ನುವ ಮಾತು ಕೇಳಿದ್ದೇನೆ. ಕೂಡಲೇ ಹಂತಕರನ್ನು ಶೂಟೌಟ್ ಮಾಡಿ, ಯಾವುದೇ ತೊಂದರೆ ಇಲ್ಲ. ಕೊಲೆ ಮಾಡಿದ ಹಂತಕನನ್ನ ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಸಿಎಂ ಹೇಳಿದ್ದರು. ಸಿಎಂ ಎಚ್‍ಡಿಕೆ ಫೋನಿನಲ್ಲಿ ಕರೆ ಮಾಡುತ್ತಿರುವ ದೃಶ್ಯ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv