ಚಿತ್ರದುರ್ಗ: ಗ್ರಾಮೀಣ ಭಾಗದ ರಸ್ತೆ ಮತ್ತು ಅಂತರ್ಜಲದ ಮಟ್ಟ ಹೆಚ್ಚಿಸುವ ಕೆಲಸಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಚಿತ್ರದುರ್ಗ ಕ್ಷೇತ್ರದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ಚಿತ್ರದುರ್ಗ ತಾಲೂಕಿನ ಪ್ರಧಾನ ಮಂತ್ರಿ ನಮ್ಮ ಗ್ರಾಮ, ನಮ್ಮ ರಸ್ತೆ ಯೋಜನೆಯಡಿ ತೋಪುರಮಾಳಿಗೆಯಿಂದ ಎಣ್ಣೆಗೆರೆ ಮುಖ್ಯರಸ್ತೆಯ ಕಾಮಗಾರಿಗೆ ಶಾಸಕ ತಿಪ್ಪಾರೆಡ್ಡಿ ಚಾಲನೆ ನೀಡಿ ಮಾತನಾಡಿದರು. ಈ ವೇಳೆ ಅವರು, ತೋಪರಮಾಳಿಗೆಯಿಂದ ಎಣ್ಣೆಗೆರೆವರೆಗೆ 35 ಲಕ್ಷ ವೆಚ್ಚದಲ್ಲಿ ರಸ್ತೆ ಮಾಡಲಾಗುತ್ತಿದೆ. ರಸ್ತೆ ಕಾಮಗಾರಿ ಗುಣಮಟ್ಟದಿಂದ ಮಾಡಲು ಸೂಚಿಸಿದ್ದೇನೆ. ಈ ಭಾಗದಲ್ಲಿ 4 ಕೋಟಿ ವೆಚ್ಚದಲ್ಲಿ 4 ಬೃಹತ್ ಚಕ್ ಡ್ಯಾಂ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ಲಂ ಬೋರ್ಡ್‍ನಿಂದ ಕೈಗೆತ್ತಿಕೊಂಡಿರುವ 50 ಮನೆಗಳನ್ನು ಜ.30 ರೊಳಗೆ ಪೂರ್ಣಗೊಳಿಸಬೇಕು: ಗೋಪಾಲಯ್ಯ
Advertisement
Advertisement
ನಮ್ಮ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಶಾಲೆಗಳು, ಅಂತರ್ಜಲ ಹೆಚ್ಚಿಸುವ ಕಡೆಗೆ ಹೆಚ್ಚಿನ ಗಮನ ನೀಡಿದ್ದೇನೆ. 75 ಭಾಗ ಹಳ್ಳಿಯಲ್ಲಿ ಸಿ.ಸಿ.ರಸ್ತೆಗಳ ನಿರ್ಮಾಣ ಮಾಡಲಾಗಿದೆ. ಅಲ್ಪ ಸ್ವಲ್ಪ ಹಳ್ಳಿಯಲ್ಲಿ ಮಾತ್ರ ರಸ್ತೆ ಮಾಡಬೇಕಿದೆ. ಜನರಿಗೆ ಅಂತರ್ಜಲ ವೃದ್ಧಿಯಾದರೆ ಬೊರವೆಲ್ ನಲ್ಲಿ ನೀರಿನ ಮಟ್ಟ ಹೆಚ್ಚಿ ಉತ್ತಮ ಮಳೆ ಬೆಳೆಯಾಗಬಹುದು. ಚೆಕ್ ಡ್ಯಾಂಗಳು ಎಲ್ಲ ಕಡೆಗಳಲ್ಲಿ ತುಂಬಿದ್ದು, ಸಂತಸ ಉಂಟು ಮಾಡಿದೆ.
Advertisement
ಕ್ಷೇತ್ರದಲ್ಲಿ ಶಾಲೆಗಳ ಅಭಿವೃದ್ಧಿಗೂ ಅನುದಾನ ನೀಡಿದ್ದು, ಕಾಮಗಾರಿ ಪ್ರಗತಿಯಲ್ಲಿವೆ. ಖಾಸಗಿ ಶಾಲೆಗಳಿಗಿಂತ ಅಚ್ಚುಕಟ್ಟಾಗಿ ಕಟ್ಟಡ ನಿರ್ಮಿಸುವ ಮೂಲಕ ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆ ತರುವ ಕೆಲಸ ಮಾಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಲಕ್ಷಾಂತರ ಹಣ ಕಟ್ಟಿ ಖಾಸಗಿ ಶಾಲೆಗೆ ಕಳಿಸುವ ಬದಲು ಉತ್ತಮವಾದ ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸಬೇಕು ಎಂಬ ಭಾವನೆಯಲ್ಲಿ ಪೋಷಕರು ಇದ್ದಾರೆ ಎಂದು ತಿಳಿಸಿದರು.
Advertisement
ಕೋವಿಡ್ ಮತ್ತು ಓಮಿಕ್ರಾನ್ ಬಗ್ಗೆ ಎಚ್ಚರ ಇರಲಿ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈಗ ನಮ್ಮ ಪ್ರಾಣ ತಮ್ಮ ಕೈಯಲ್ಲಿದೆ. ಎಲ್ಲರೂ ಸಹ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಿ ಎಂದು ಸಂದೇಶ ಕೊಟ್ಟರು. ಎಲ್ಲಾರಿಗೂ ಸಹ ತನ್ನದೇ ಆದ ಕುಟುಂಬಗಳಿವೆ. ನಮಗಾಗಿ ನಮ್ಮವರಿಗಾಗಿ ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ತೆಲುಗು ಭಾಷೆಯನ್ನು ನೀವು ಅನುವಾದಿಸಿದರೆ ಸೆಕ್ಸಿಸ್ಟ್ ಆಗಿ ಕಾಣುತ್ತೆ: ನಾಗಾರ್ಜುನ ಅಕ್ಕಿನೇನಿ
ಈ ಸಂದರ್ಭದಲ್ಲಿ ಎಂಜಿನಿಯರ್ ನಾಗರಾಜು, ಗುತ್ತಿಗೆದಾರ ಎಟಿಎಸ್ ತಿಪ್ಪೇಸ್ವಾಮಿ, ಗ್ರಾಮ ಪಂಚಾಯತಿ ಅಧ್ಯಕ್ಷ ಬೋಸಣ್ಣ, ಸದಸ್ಯರಾದ ಓಬಳೇಶ್, ವೆಂಕಟೇಶ್, ಮುಖಂಡರಾದ ನಾಗೇಂದ್ರ ರೆಡ್ಡಿ, ಸುರೇಶ್ ರೆಡ್ಡಿ, ಶಶಿಧರ್, ಸುರೇಶ್, ರಾಜೇಶ್, ಮಾರುತಿ ಗ್ರಾಮಸ್ಥರು ಇದ್ದರು.