ಹಾವೇರಿ: ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ದೇಶ ಹಾಗೂ ರಾಜ್ಯದ ನಾನಾ ಭಾಗಗಳಲ್ಲಿ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಆದರೆ ಹಾವೇರಿ ಜಿಲ್ಲೆಯಲ್ಲಿ ಎಂದಿನಂತೆ ಸಾರಿಗೆ ಬಸ್ ಕಾರ್ಯ ನಿರ್ವಹಿಸುತ್ತಿದ್ದು, ರಾಣೇಬೆನ್ನೂರಿನಿಂದ ಹುಬ್ಬಳ್ಳಿಗೆ ಹೋಗುವ ಪ್ರಯಾಣಿಕನನ್ನು ಹಾವೇರಿಯಲ್ಲಿ ಬಿಟ್ಟಿದ್ದಕ್ಕಾಗಿ ಸಾರಿಗೆ ಸಿಬ್ಬಂದಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ ನಡೆದಿದೆ.
ರಾಣೇಬೆನ್ನೂರು ನಗರದಿಂದ ಹುಬ್ಬಳ್ಳಿ ಸಾರಿಗೆ ಬಸ್ ಬಿಡಲಾಗಿದೆ. ಆದರೆ ಹುಬ್ಬಳ್ಳಿಯಲ್ಲಿ ಸಂಪೂರ್ಣ ಬಂದ್ ಆಗಿರೋ ಹಿನ್ನೆಲೆಯಲ್ಲಿ ರಾಣೇಬೆನ್ನೂರಿನಿಂದ ಕರೆದುಕೊಂಡು ಬಂದು ಹಾವೇರಿಗೆ ಬಿಡಲಾಯಿತು. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರೊಬ್ಬರು ಬಸ್ ಬಂದ್ ಮಾಡಿ, ಇಲ್ಲ ಅಂದರೆ ಪ್ರಯಾಣಿಕರು ಹೇಳಿದ ಸ್ಥಳಕ್ಕೆ ತಲುಪಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದನು.
Advertisement
Advertisement
ಆಕ್ರೋಶಗೊಂಡ ಪ್ರಯಾಣಿಕ ಮತ್ತು ಕೆಎಸ್‍ಆರ್‍ಟಿಸಿ ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಸಾರಿಗೆ ಇಲಾಖೆಯ ಸಿಬ್ಬಂದಿ ಪ್ರಯಾಣಿಕನನ್ನು ಹಿಡಿದು ಕಳಿಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv