ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ಭದ್ರತಾ ಪಡೆಗಳು (Security Force) ಮತ್ತು ಭಯೋತ್ಪಾದಕರ (Terrorist) ನಡುವೆ ಶನಿವಾರ ಎನ್‌ಕೌಂಟರ್ ನಡೆದಿದ್ದು, ಓರ್ವ ಸೇನಾ ಸಿಬ್ಬಂದಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ.
ಮೊದರ್ಗಾಮ್ ಗ್ರಾಮದಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಸಿಆರ್‌ಪಿಎಫ್, ಸೇನೆ ಮತ್ತು ಸ್ಥಳೀಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ನಂತರ ಎನ್‌ಕೌಂಟರ್ (Encounter) ನಡೆದಿದೆ. ಈ ವೇಳೆ ಸೇನಾ ಸಿಬ್ಬಂದಿ ಗಾಯಗೊಂಡಿದ್ದರು. ಆರಂಭಿಕ ಗುಂಡಿನ ದಾಳಿಯಲ್ಲಿ ಗಾಯಗೊಂಡ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಡೆಂಗ್ಯೂನಿಂದ ಜನ ಸಾಯ್ತಿದ್ರೆ, ಸಚಿವರು ಸ್ವಿಮ್ಮಿಂಗ್ ಪೂಲ್‍ನಲ್ಲಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಕಿಡಿ
ಕಾಶ್ಮೀರ ವಲಯ ಪೊಲೀಸರು ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕುಲ್ಗಾಮ್ ಜಿಲ್ಲೆಯ ಮೊದರ್ಗಾಮ್ ಗ್ರಾಮದಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು. ಪೊಲೀಸ್ ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಕಗ್ಗಂಟು- ಟಿಕೆಟ್ ಸಿಗದಿದ್ದರೆ ಪಕ್ಷೇತರ ಸ್ಪರ್ಧೆ ಸುಳಿವು ನೀಡಿದ ಸಿಪಿವೈ