ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ದೆಹಲಿಯ ಕ್ರೈಂ ಬ್ರಾಂಚ್ ಪೊಲೀಸರು (Police) ಇಬ್ಬರು ಶೂಟರ್‌ಗಳಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ.
ದೆಹಲಿಯ ದ್ವಾರಕಾದ ಆಯಾ ನಗರ ಪ್ರದೇಶದಲ್ಲಿ ಈ ಎನ್‍ಕೌಂಟರ್ (Encounter) ನಡೆದಿದೆ. ಬಂಧಿತರಲ್ಲಿ ಒಬ್ಬ ಆರೋಪಿ ಯಾದ್ ರಾಮ್ (50) ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಾದ್ಯಂತ ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ ಸುಮಾರು 24 ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 14 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಬಂಧಿತರು ಶೂಟೌಟ್ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದರು. ಅವರನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಇಬ್ಬರೂ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಆರೋಪಿಗಳ ಕಾಲುಗಳಿಗೆ ಗುಂಡೇಟಿನ ಗಾಯಗಳಾಗಿವೆ. ಈ ಎನ್‌ಕೌಂಟರ್‌ನಲ್ಲಿ 69 ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ಬೇರೆ ಬೇರೆ ರಾಜ್ಯಗಳಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಇವರ ತಲೆಗೆ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಆರೋಪಿಗಳನ್ನು ಬಂಧಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ನಾಲ್ವರು ಮಾವೋವಾದಿಗಳು ಬಲಿ

