ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸೋಪೋರ್‌ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಶನಿವಾರ ಗುಂಡಿನ ಚಕಮಕಿ (Sopore Encounter) ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಘಟನೆ ನಂತರ ಎಚ್ಚೆತ್ತ ಭದ್ರತಾ ಸಿಬ್ಬಂದಿ ಗುಂಡಿನ ದಾಳಿಗೆ ಪ್ರತಿದಾಳಿ ನಡೆಸಿದರು. ತಕ್ಷಣವೇ ಪಡೆಗಳು ಸೋಪೋರ್‌ನ ವಾಟರ್‌ಗಾಮ್ ಪ್ರದೇಶವನ್ನು ಸುತ್ತುವರಿದು ಉಗ್ರರನ್ನು ಬೇಟೆಯಾಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಅಸ್ಸಾಂ ಲೈಂಗಿಕ ದೌರ್ಜನ್ಯ ಆರೋಪಿ ಪೊಲೀಸರಿಂದ ಎಸ್ಕೇಪ್ ವೇಳೆ ಕೆರೆಗೆ ಬಿದ್ದು ಸಾವು
Advertisement
Advertisement
ಕಳೆದ ಐದು ದಿನಗಳ ಹಿಂದೆಯಷ್ಟೇ ಉಧಮ್‌ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದರು. ದಾಳಿಯಲ್ಲಿ ಸಿಆರ್‌ಪಿಎಫ್‌ನ 187 ಬೆಟಾಲಿಯನ್‌ನ ಇನ್ಸ್‌ಪೆಕ್ಟರ್ ಕುಲದೀಪ್ ಕುಮಾರ್ ಗುಂಡೇಟಿನಿಂದ ಗಾಯಗೊಂಡರು. ಇದನ್ನೂ ಓದಿ: ಪೋಲೆಂಡ್, ಉಕ್ರೇನ್ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್
Advertisement
J&K ನಲ್ಲಿ ಭಯೋತ್ಪಾದಕ ದಾಳಿಗಳ ಹೆಚ್ಚಳ:
ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿವೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಇತ್ತೀಚೆಗೆ ದೋಡಾದ ಎನ್‌ಕೌಂಟರ್‌ನಲ್ಲಿ ಸೇನಾಧಿಕಾರಿ ಕ್ಯಾಪ್ಟನ್ ದೀಪಕ್ ಸಿಂಗ್ ಸಾವನ್ನಪ್ಪಿದ್ದರು, ಇದಕ್ಕೂ ಮುನ್ನ ಶಿವಗಢ-ಅಸ್ಸಾರ್ ಪ್ರದೇಶದ ಕಾರ್ಯಾಚರಣೆ ವೇಳೆ ಅರಣ್ಯ ಪ್ರದೇಶ ಭಾಗದಲ್ಲಿ ಅಧಿಕಾರಿಯೊಬ್ಬರಿಗೆ ಗುಂಡೇಟು ತಗುಲಿತ್ತು.
Advertisement
ಹಾಗಾಗಿಯೇ ಈ ತಿಂಗಳ ಆರಂಭದಲ್ಲಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಹ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ್ದರು. ದೆಹಲಿಯ ಸೌತ್ ಬ್ಲಾಕ್‌ನಲ್ಲಿ ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರೊಂದಿಗೆ ಮಾತುಕತೆ ನಡೆದಿ ಭದ್ರತೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿತ್ತು. ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ: ಬೆಂಗಳೂರಿನ ಇಸ್ಕಾನ್ ಟೆಂಪಲ್ ಬಳಿ ಸಂಚಾರ ಮಾರ್ಗದಲ್ಲಿ ಬದಲಾವಣೆ
ಕ್ರಿಯಾ ಯೋಜನೆಗೆ ಪ್ಲ್ಯಾನ್:
ಕಾಶ್ಮೀರ ಕಣಿವೆಯನ್ನು ಭದ್ರ ಪಡಿಸಿರುವ ಕೇಂದ್ರ ಸರ್ಕಾರ ಇದೀಗ ಜಮ್ಮುವನ್ನು ಗುರಿಯಾಗಿಸುತ್ತಿರುವ ಉಗ್ರರನ್ನು ಮಟ್ಟಹಾಕಲು ಮುಂದಾಗಿದೆ. ಅದಕ್ಕಾಗಿ ಜಮ್ಮು ಪ್ರದೇಶದಲ್ಲಿ ಭದ್ರತೆ ಹೆಚ್ಚಿಸುವ ಅಗತ್ಯತೆಗಳನ್ನು ಗುರುತಿಸಿದೆ. ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲು ಭಯೋತ್ಪಾದಕರು ಕಂಡುಕೊಂಡಿರುವ ಒಳನುಸುಳುವಿಕೆ ಮಾರ್ಗಗಳನ್ನು ಗುರುತಿಸಿ ಅನಾಹುತಕ್ಕೆ ತಡೆಹಾಕುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ| ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – 22 ಮಂದಿಗೆ ಗಾಯ
ಕಾಶ್ಮೀರ ಬಿಟ್ಟು ಜಮ್ಮುವಿನತ್ತ ಚಿತ್ತ ಹರಿಸಿದ್ದೇಕೆ?
2014 ರಿಂದ 2018ರ ಅವಧಿ ಜಮ್ಮು ಮತ್ತು ಕಾಶ್ಮೀರ ಸ್ಥಳಗಳು ಉಗ್ರರ ಸ್ವರ್ಗವಾಗಿತ್ತು. 2014ರಿಂದ 2018ರ ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 1,708 ಉಗ್ರರ ದಾಳಿಗಳು ನಡೆದಿದ್ದವು, 2018ರಿಂದ 2022ರ ವರೆಗೆ 761 ಉಗ್ರರ ದಾಳಿಗಳು ನಡೆದು 174 ಮಂದಿ ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿದಾಳಿ ನಡೆಸಿದ್ದ ಸೇನೆ (Indian Army) 626 ಉಗ್ರರನ್ನು ಬಲಿ ಪಡೆದಿತ್ತು. 2023ರಲ್ಲಿ ಜಮ್ಮು ಪ್ರದೇಶದಲ್ಲಿ ಮಾತ್ರವೇ ಸುಮಾರು 40 ಭಯೋತ್ಪಾದಕ ದಾಳಿಗಳು ನಡೆದಿರುವುದಾಗಿ ಸೇನೆ ಹೇಳಿದೆ. 2019ರಲ್ಲಿಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತು. ಆ ನಂತರ ಹೆಚ್ಚಿನ ದಾಳಿ ನಡೆಯುತ್ತಿದ್ದ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ದೀರ್ಘಕಾಲದ ಶಾಂತಿ ನೆಲೆಸಿತ್ತು. ಹೆಚ್ಚಿನ ಭದ್ರತಾ ಪಡೆಗಳು ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಬೀಡುಬಿಟ್ಟ ಕಾರಣ ಉಗ್ರರು ಜಮ್ಮುವನ್ನು ಟಾರ್ಗೆಟ್ ಮಾಡಿ ದಾಳಿ ನಡೆಸುತ್ತಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.