Bengaluru CityDistrictsKarnatakaLatestMain Post

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ನಗರದ ಮಹದೇವಪುರ (Mahadevapura) ವಲಯ ವ್ಯಾಪ್ತಿಯಲ್ಲಿ ಇಂದು ಕಸವನಗಳ್ಳಿಯ ವಲ್ಲಿಯಮ್ಮ ಲೇಔಟ್, ಗ್ರೀನ್ ಹುಡ್ ರೆಸಿಡೆನ್ಸಿ, ಮಾರತಹಳ್ಳಿ ಪೊಲೀಸ್ ಠಾಣೆಯ ಹಿಂಭಾಗ ಜಲಮಂಡಳಿಯ ಎಸ್.ಟಿ.ಪಿ ಬಳಿ ರಾಜಕಾಲುವೆ ಮೇಲೆ ನಿರ್ಮಿಸಿದ್ದ ಆರ್.ಸಿ.ಸಿ ಸೇತುವೆಯ ತೆರವು ಕಾರ್ಯಾಚರಣೆಯನ್ನು ಮಾಡಲಾಗಿದೆ.

ಕಸವನಹಳ್ಳಿ ವಲ್ಲಿಯಮ್ಮ ಲೇಔಟ್ ನಲ್ಲಿ ಶೆಡ್ ಗಳನ್ನು ತೆರವುಗೊಳಿಸಲಾಗಿದೆ. ಗ್ರೀನ್ ಹುಡ್ ರೆಸಿಡೆನ್ಸ್ (Green Hood Residency) ಆವರಣದಲ್ಲಿ ಸುಮಾರು 150 ಮೀಟರ್ ಉದ್ದದ ಮಳೆ ನೀರುಗಾಲುವೆಯ ಮೇಲೆ ಅಳವಡಿಸಿದ್ದ ಸ್ಲ್ಯಾಬ್ ನ ತೆರವು ಕಾರ್ಯ ಬಹತೇಕ ಪೂರ್ಣಗೊಂಡಿದ್ದು, ಸ್ಲ್ಯಾಬ್ ಗೆ ಅಳವಡಿಸಿದ್ದ ಗ್ರಿಲ್ ತೆರವುಗೊಳಿಸಬೇಕಿರುತ್ತದೆ. ಮಳೆ ನೀರುಗಾಲುವೆ ಮೇಲೆ ನಿರ್ಮಿಸಿದ್ದ ಕಾಂಪೌಂಡ್ ಗೋಡೆಯನ್ನು ಕೂಡಾ ತೆರವುಗೊಳಿಸಲಾಗಿದೆ.

ಮಾರತಹಳ್ಳಿ (Marathahalli) ಪೊಲೀಸ್ ಠಾಣೆಯ ಹಿಂಭಾಗ, ಜಲಮಂಡಳಿ ಎಸ್.ಟಿ.ಪಿ ಬಳಿ ರಾಜಕಾಲುವೆಯ ಮೇಲೆ ನಿರ್ಮಾಣ ಮಾಡಿರುವ ಸೇತುವೆ ತೆರವು ಕಾರ್ಯಾಚರಣೆಯು ಬಹುತೇಕ ಪೂರ್ಣಗೊಂಡಿದ್ದು, ನಾಳೆಯೂ ತೆರವು ಕಾರ್ಯಾಚರಣೆ ಮುಂದುವರಿಯಲಿದೆ.

ಕಸವನಹಳ್ಳಿ, ಹೂಡಿ ವ್ಯಾಪ್ತಿಯಲ್ಲಿ ಸರ್ವೇ ಕಾರ್ಯವನ್ನು ಮಾಡುತ್ತಿದ್ದು, ಒತ್ತುವರಿ ಮಾಡಿರುವ ಜಾಗವನ್ನು ಮಾರ್ಕಿಂಗ್ ಮಾಡಿದ ಬಳಿಕ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತದೆ. ಇದನ್ನೂ ಓದಿ: ಭ್ರಷ್ಟಾಚಾರ ಮುಗಿಸಲು ನಾವು ಬಂದಿದ್ದೇವೆ – ಬಿಜೆಪಿ, ಕಾಂಗ್ರೆಸ್ ನಡುವೆ ವಾಕ್ಸಮರ

Live Tv

Leave a Reply

Your email address will not be published.

Back to top button