ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ತಾಲೂಕಿನ ಗೋಳಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ (Forest Department) ಅರಣ್ಯ ಒತ್ತುವರಿ ತೆರವಿಗೆ (Encroachment Clearance) ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅರಣ್ಯ ಇಲಾಖೆಗೆ ಸೇರಿದ 389.07 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದೆ.
ಈ ಹಿಂದೆ ಗೋಳಿಕಟ್ಟಾದಲ್ಲಿ ಕಾಮಧೇನು ಹಾಲು ಹಾಗೂ ಹಣ್ಣು ಸಂಸ್ಕರಣಾ ಸಹಕಾರಿ ಸಂಘಕ್ಕೆ ಅರಣ್ಯ ಇಲಾಖೆ ತನ್ನ ಜಾಗವನ್ನು ಲೀಸ್ ನೀಡಿತ್ತು. ಲೀಸ್ ಮುಕ್ತಾಯವಾದರೂ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ. ಈ ಸಂಬಂಧ ಧಾರವಾಡದ ಹೈಕೋರ್ಟ್ ಪೀಠದಲ್ಲಿ ದಾವೆ ಇದ್ದು, ಇದೀಗ ಅರಣ್ಯ ಇಲಾಖೆ ಪರ ತೀರ್ಪು ಬಂದಿದೆ. ಜೊತೆಗೆ, ಈ ಜಾಗದಲ್ಲಿ ಹಲವರು ಒತ್ತುವರಿ ಮಾಡಿಕೊಂಡು ವಾಸವಿದ್ದರು. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ, ಟ್ರ್ಯಾಕ್ಟರ್ ಮೂಲಕ ಒತ್ತುವರಿ ತೆರವುಗೊಳಿಸಿದರು. ಇದನ್ನೂ ಓದಿ: ಮುಡಾದಿಂದ ಹಂಚಿಕೆಯಾದ 4,350 ಸೈಟ್ ರದ್ದಾಗಬೇಕು – ಬಿಜೆಪಿ ಶಾಸಕ ಶ್ರೀವತ್ಸ ಆಗ್ರಹ
ಈ ವೇಳೆ, ಸ್ಥಳೀಯ ಮಹಿಳೆಯರು, ವೃದ್ಧರು ತೀವ್ರ ವಿರೋಧ ವ್ಯಕ್ತಪಡಿಸಿದರು. ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ತರಾದರು. ಇದರಿಂದ ಕೆರಳಿದ ಒತ್ತುವರಿದಾರರು ರಸ್ತೆ ತಡೆ ನಡೆಸಿದರು. ಗೋಳಿಕಟ್ಟಾ ಸುತ್ತಮುತ್ತ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟರು. ಇದನ್ನೂ ಓದಿ: KPSC ಹಗರಣ | ನಾಪತ್ತೆಯಾದ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಮನೇಲಿ ED ಶೋಧ

