ರಾಮನಗರ: ಕುಮಾರಸ್ವಾಮಿ (HD Kumaraswamy) ಕುಟುಂಬದ ವಂಶಪಾರಂಪರ್ಯ ರಾಜಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಜನತೆ ಅಂತ್ಯ ಹಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ (CP Yogeshwara) ಟಾಂಗ್ ನೀಡಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಪಿವೈ, ಹೆಚ್‌ಡಿಕೆಯಿಂದ ಇಡೀ ಜಿಲ್ಲೆಯಲ್ಲಿ ಒಬ್ಬ ಜೆಡಿಎಸ್ (JDS) ಕಾರ್ಯಕರ್ತನಿಗೂ ಅನುಕೂಲ ಆಗಿಲ್ಲ. ಕಾರ್ಯಕರ್ತ, ಮುಖಂಡರಿಗೆ ಪಕ್ಷದಲ್ಲಿ ಒಂದು ಸ್ಥಾನಮಾನ ನೀಡಿಲ್ಲ. ಜಿಲ್ಲೆಯಲ್ಲಿ ಜೆಡಿಎಸ್‌ನಿಂದ ನೊಂದವರೇ ಹೆಚ್ಚು. ಕೇವಲ ಅಪ್ಪ-ಮಗ ಫೋಟೋ ಹಾಕಿಕೊಂಡು ಜಿಲ್ಲೆಯ ಜನರನ್ನು ಗುಲಾಮರ ರೀತಿ ನೋಡುತ್ತಿದ್ದಾರೆ. ಆದರೆ ಇದು 2023ರಲ್ಲಿ ನಡೆಯುವುದಿಲ್ಲ. ಜನರು ತಕ್ಕಪಾಠ ಕಲಿಸುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿಪಿವೈ ಗುಡುಗಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ 1,500 ಕೋಟಿ ರೂ. ಅನುದಾನ ತಂದಿರುವುದಾಗಿ ಕುಮಾರಸ್ವಾಮಿ ಹೇಳಿದ್ದು, ಈ ಎಲ್ಲಾ ಕಾಮಗಾರಿಯನ್ನು ಬೇನಾಮಿ ಹೆಸರಿನಲ್ಲಿ ತಾವೇ ನಡೆಸಿದ್ದಾರೆ. ಗುತ್ತಿಗೆದಾರರಿಂದ ದಂಧೆ ನಡೆಸಿ, ಆ ಪಾಪದ ಹಣವನ್ನು ಹೆಲಿಕಾಪ್ಟರ್‌ನಲ್ಲಿ ಹೂವಿನ ರೂಪದಲ್ಲಿ ಚೆಲ್ಲಿಸಿಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಬಗ್ಗೆ ಬಿಎಲ್ ಸಂತೋಷ್ ಹೇಳಿಕೆ ಸರಿಯಾಗಿಯೇ ಇದೆ. ಸಂತೋಷ್ ಜೀ ಅವರ ಬಗ್ಗೆ ವೈಯಕ್ತಿಕ ಟೀಕೆ ಸರಿಯಲ್ಲ ಎಂದರು. ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್ ಅಗತ್ಯವಿಲ್ಲ : IMA
ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ವಿಚಾರದಲ್ಲಿ ಜೆಡಿಎಸ್ ಜನರ ದಿಕ್ಕು ತಪ್ಪಿಸುತ್ತಿದೆ. ಕುಮಾರಣ್ಣ ಸಾಲ ಮನ್ನಾ ಮಾಡುತ್ತಾರೆ, ಎಷ್ಟು ಬೇಕೋ ಅಷ್ಟು ಸಾಲ ತಗೊಳ್ಳಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿರೋದು ಹಾಸ್ಯಾಸ್ಪದ. ಕಳೆದ ಬಾರಿಯೂ ಇವರ ಮಾತು ನಂಬಿಕೊಂಡು ಜನರ ಆಸ್ತಿ ಹರಾಜಾಯಿತು ಎಂದು ಸಿಪಿವೈ ಟೀಕಿಸಿದರು. ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪಠ್ಯದಲ್ಲಿ ಪುನೀತ್ ರಾಜಕುಮಾರ್