LatestLeading NewsMain PostNational

ಪತ್ರಾ ಚಾವ್ಲ್ ಭೂ ಹಗರಣ: ಸಂಜಯ್ ರಾವತ್ ನಿವಾಸದ ಮೇಲೆ ಇಡಿ ದಾಳಿ

Advertisements

ಮುಂಬೈ: ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಇಂದು ಬೆಳಗ್ಗೆಯೇ ದಾಳಿ ಮಾಡಿದ್ದಾರೆ.

1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿದ್ದರು. ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಅಧಿವೇಶನವನ್ನು ಉಲ್ಲೇಖಿಸಿ ಹಿಂದಿನ ಸಮನ್ಸ್ ತಪ್ಪಿಸಿದ ನಂತರ ಸಂಜಯ್ ರಾವತ್ ಅವರನ್ನು ಜುಲೈ 27 ರಂದು ತನಿಖಾ ಸಂಸ್ಥೆಯು ಕರೆಸಿತ್ತು. ಇದನ್ನೂ ಓದಿ: ಭದ್ರತಾ ಪಡೆಗಳ ಎನ್‍ಕೌಂಟರ್‌ನಲ್ಲಿ ಎಲ್‍ಇಟಿ ಉಗ್ರ ಬಲಿ

ಇಂದು ಬೆಳಗ್ಗೆ ಮುಂಬೈನ ಬಂಡಪ್‍ನಲ್ಲಿರುವ ರಾವತ್ ಅವರ ಮನೆಗೆ ತನಿಖಾ ಸಂಸ್ಥೆ ತಂಡವು ಸಿಆರ್‌ಪಿಎಫ್ ಅಧಿಕಾರಿಗಳ ಜೊತೆ ದಾಳಿ ಮಾಡಿದೆ. ಸದ್ಯ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಮುಂಬೈನ ಪತ್ರಾ ಚಾಲ್‍ನ ಮರು-ಅಭಿವೃದ್ಧಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾವತ್‍ಗೆ ಸಮನ್ಸ್ ನೀಡಿತ್ತು. ಆದರೆ ಅವರು ಈ ಸಮನ್ಸ್ ನಿರಾಕರಿಸಿ ಇದು ರಾಜಕೀಯ ದ್ವೇಷದ ಕಾರಣದಿಂದ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದರು.

ಜುಲೈ 1 ರಂದು ರಾವತ್ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‍ಎ) ಕ್ರಿಮಿನಲ್ ಸೆಕ್ಷನ್‍ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಏಪ್ರಿಲ್‍ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದನ್ನೂ ಓದಿ:  Commonwealth Games 2022: ಭಾರತಕ್ಕೆ ನಾಲ್ಕನೇ ಪದಕ – ವೇಟ್‍ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ

Live Tv

Leave a Reply

Your email address will not be published.

Back to top button