ಬೆಂಗಳೂರು: ಆಂಬಿಡೆಂಟ್ ಕಂಪನಿ ಜೊತೆ 20 ಕೋಟಿ ಡೀಲ್ ಕೇಸಲ್ಲಿ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಜೈಲಿಗೆ ಹೋದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ನಿಮ್ಮ ವಿರುದ್ಧದ ಆರೋಪಗಳಿಗೆ ತ್ವರಿತ ಸ್ಪಷ್ಟೀಕರಣ ನೀಡಿ ಎಂದು ಡಿ.ಕೆ ಶಿವಕುಮಾರ್ ಗೆ ಗುರುವಾರ ಜಾರಿ ನಿರ್ದೇಶನಾಲಯದಿಂದ ನೋಟಿಸ್ ಜಾರಿಯಾಗಿದೆ. ಉನ್ನತ ಪದವಿಗೆ ತೆರಳಿದ ಮೇಲೆ ಘನತೆಯಿಂದ ನಡೆದುಕೊಳ್ಳಬೇಕು. ದ್ವೇಷದ ರಾಜಕಾರಣ ಬಿಜೆಪಿ ನಾಯಕರಿಂದ ಹೆಚ್ಚಾಗುತ್ತಿದೆ. ಜನರು ಎಲ್ಲವನ್ನು ಅವಲೋಕಿಸಿ ಸೂಕ್ತ ಬೈ ಎಲೆಕ್ಷನ್ ನಂತೆ ಲೋಕಸಭೆ ಫಲಿತಾಂಶ ಇರಲಿದೆ ಎಂದು ಸಂಸದ ಉಗ್ರಪ್ಪ ನವದೆಹಲಿಯಲ್ಲಿ ತಿಳಿಸಿದ್ದಾರೆ.
ಹವಾಲ ದಂಧೆಕೋರ ಆರೋಪ ಇರುವ ಚೆನ್ನೈನ ಸೆಲ್ವಂ ಕುಮಾರ್ ಅವರಿಗೂ ಈ ವಿಚಾರಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಯಾಗಿದೆ. ಡಿ.ಕೆ. ಶಿವಕುಮಾರ್ ಜೊತೆ ಲಿಂಕ್ ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಸೆಲ್ವಂ ಕುಮಾರ್ ನಿವಾಸದ ಮೇಲೆ ದಾಳಿ ನಡೆಸಿತ್ತು.
ಸಚಿವ ಶಿವಕುಮಾರ್ ಐಟಿ ಇಲಾಖೆಯ ಮೇಲೆ ಕಾನೂನು ಹೋರಾಟ ನಡೆಸುತ್ತಿದ್ದು, ಪ್ರಕರಣದಿಂದ ಕೈ ಬಿಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇಂದು ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
ಐಟಿ ಅಧಿಕಾರಿಗಳು ಪೂರ್ವಾಗ್ರಹ ಪೀಡಿತರಾಗಿ ದಾಳಿ ನಡೆಸಿದ್ದಾರೆ. ಸಚಿವರೊಬ್ಬರ ಮನೆಯ ಮೇಲೆ ದಾಳಿ ನಡೆಸುವಾಗ ಕಾನೂನು ಪ್ರಕ್ರಿಯೆಗಳು ಮಾಡಿಲ್ಲ. ಮಾಧ್ಯಮದ ಮುಂದೆಯೇ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಹೀಗಾಗಿ ಪ್ರಕರಣದಿಂದ ನನ್ನ ಹೆಸರನ್ನು ಕೈ ಬಿಡಬೇಕೆಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಈ ನಡುವೆ ಇದೇ ವಿಚಾರದ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ನೋಟಿಸ್ ನೀಡಿರುವವರು ಅದಕ್ಕೆ ಉತ್ತರ ನೀಡುತ್ತಾರೆ. ಇದಕ್ಕೂ ರಾಜ್ಯ ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಡಿ.ಕೆ. ಶಿವಕುಮಾರ್ ಗೆ ಇಡಿ ನೋಟಿಸ್ ದ್ವೆಷದ ರಾಜಕಾರಣ ಎಂದು ಹೇಳಲ್ಲ. ಕಾನೂನಿನ ಅಡಿ ಕೆಲಸ ನಡೆಯುತ್ತವೆ. ಯಾರು ಆತಂಕಕ್ಕೆ ಒಳಗಾಗೋದು ಬೇಡ, ಅದಕ್ಕೆ ಅವರು ಉತ್ತರ ಕೊಡುತ್ತಾರೆ. ರಾಜ್ಯ ಸರ್ಕಾರಕ್ಕೂ ಇಡಿ ನೋಟಿಸಿಗೆ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews