ಬೆಂಗಳೂರು: ಕೆಪಿಸಿಸಿ(KPCC) ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಅವರಿಗೆ ಜಾರಿ ನಿರ್ದೇಶನಾಲಯ(Enforcement Directorate) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಸೆ.19 ಸೋಮವಾರ ದೆಹಲಿಯ ಇಡಿ ಕಚೇರಿಗೆ ಖುದ್ದು ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ಅಧಿವೇಶನ ನಡೆಯುತ್ತಿರುವಾಗಲೇ ಸಮನ್ಸ್ ಜಾರಿ ಮಾಡಿದ್ದಕ್ಕೆ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್‍ನಲ್ಲಿ ಭಿನ್ನಮತ ಸ್ಫೋಟ- ಬಹಿರಂಗವಾಗಿ ಆಕ್ರೋಶ ಹೊರಹಾಕಿದ ಹೆಚ್.ಡಿ.ರೇವಣ್ಣ
Advertisement
#BharatJodoYatra ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ.
ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ.
— DK Shivakumar (@DKShivakumar) September 15, 2022
Advertisement
ಭಾರತ್ ಜೋಡೋ(Bharat Jodo) ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.