ಕೇಜ್ರಿವಾಲ್‌ ನಿವಾಸದಲ್ಲಿ ಇ.ಡಿ ಶೋಧ – ದೆಹಲಿ ಸಿಎಂ ಬಂಧನ ಸಾಧ್ಯತೆ

Public TV
1 Min Read
CM Arvind Kejriwal

ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಇದರ ಬೆನ್ನಲ್ಲೇ ಇ.ಡಿ (Enforcement Directorate) ಅಧಿಕಾರಿಗಳ ತಂಡವು ಕೇಜ್ರಿವಾಲ್‌ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸುತ್ತಿವೆ.

12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್‌ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ಇ.ಡಿ ಯಿಂದ ಕೇಜ್ರಿವಾಲ್‌ ಬಂಧನ ಸಾಧ್ಯತೆ ಇದೆ. ಇದನ್ನೂ ಓದಿ: ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ – ಬಿಜೆಪಿಯಿಂದ 3ನೇ ಪಟ್ಟಿ ರಿಲೀಸ್‌

Enforcement Directorate

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‌ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್‌ಗೂ ಕೂಡ ಪ್ರತಿಕ್ರಿಯಿಸಿಲ್ಲ.

ಒಂಬತ್ತು ಬಾರಿ ಇ.ಡಿ ಸಮನ್ಸ್‌ ನೀಡಿದೆ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಇದನ್ನೂ ಓದಿ: ಐತಿಹಾಸಿಕ ಸೋಲಿನ ಭೀತಿ ಹಿನ್ನೆಲೆ ಬಿಜೆಪಿ ವಿರುದ್ಧ ಆರೋಪ – ಕಾಂಗ್ರೆಸ್ ಆರೋಪಕ್ಕೆ ಜೆಪಿ ನಡ್ಡಾ ತಿರುಗೇಟು

Share This Article