ಬೀದರ್: ನಿಶ್ಚಿತಾರ್ಥ ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಅಧಿಕ ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಸ್ತಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾರುತಿ ಪಾಟೀಲ ಎಂಬವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ ನಿಮಿತ್ತ ಮಧ್ಯಾಹ್ನ ಸುಮಾರು 2 ಗಂಟೆಗೆ ಊಟ ಮಾಡಿದ ಜನರಿಗೆ ವಾಂತಿ ಭೇದಿ ಶುರುವಾಗಿದ್ದು, ವಾಂತಿ ಭೇದಿಯಿಂದ ಜನರ ಅಸ್ವಸ್ಥರಾಗಿದ್ದಾರೆ. ಬಸವಕಲ್ಯಾಣ ನಗರದ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಾದ ಪಾಟೀಲ್ ಆಸ್ಪತ್ರೆ, ರಿಫಾ ಆಸ್ಪತ್ರೆ, ಬಿರಾದಾರ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Advertisement
ಮುಸ್ತಾಪುರ ಗ್ರಾಮದ ಯುವತಿಯನ್ನು ನಾರಾಯಣಪೂರ ಗ್ರಾಮದ ಯುವಕನೊಂದಿಗೆ ಮದುವೆ ಸಂಬಂಧ ನಿಶ್ಚಿತಾರ್ಥ ನಡೆಸಲಾಗುತ್ತಿತ್ತು. ಮುಸ್ತಾಪುರ ಸೇರಿದಂತೆ ಮುಚಳಂಬ, ನಾರಾಯಣಪೂರ ಗ್ರಾಮದಿಂದ ಆಗಮಿಸಿದ ಸಂಬಂಧಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಊಟ ಮಾಡಿದರು. ಸುಮಾರು 600ರಷ್ಟು ಜನ ಊಟ ಮಾಡಿದ್ದು, ಇದರಲ್ಲಿ ಸುಮಾರು 200ಕ್ಕೂ ಅಧಿಕ ಜನರಿಗೆ ವಾಂತಿ, ಭೇದಿ ಶುರುವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
Advertisement
ಅಸ್ವಸ್ಥರಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲಾ ವಯೋಮಾನದ ಜನರಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ. ಸುದ್ದಿ ತಿಳಿದು ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತ ಭಂವರಸಿಗ್ ಮೀನಾ, ಸಿಪಿಐ ಮಹೇಶಗೌಡ ಪಾಟೀಲ್, ಪಿಎಸ್‍ಐ ಸುನೀಲಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿನೆ ನಡೆಸಿ ಘಟನೆ ಬಗ್ಗೆ ಮಾಹಿತಿ ಪಡೆದರು.