ಅಗರ್ತಲಾ: ತ್ರಿಪುರಾದ ಅಗರ್ತಲಾದಿಂದ (Agartala) ಮುಂಬೈಗೆ (Mumbai) ತೆರಳುತ್ತಿದ್ದ ಎಕ್ಸ್‌ಪ್ರೆಸ್ (Lokmanya Tilak Express) ರೈಲಿನ ಇಂಜಿನ್ ಮತ್ತು 8 ಬೋಗಿಗಳು ಅಸ್ಸಾಂನ ದಿಬೋಲಾಂಗ್ ನಿಲ್ದಾಣದ ಬಳಿ ಹಳಿತಪ್ಪಿವೆ.
12520 ಅಗರ್ತಲಾ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ ಇಂದು ಬೆಳಿಗ್ಗೆ ಅಗರ್ತಲಾದಿಂದ ಹೊರಟಿತ್ತು. ಅಸ್ಸಾಂನ ಲುಮ್ಡಿಂಗ್-ಬದರ್‌ಪುರ್ ವಿಭಾಗದ ಬಳಿ ಈ ಘಟನೆ ನಡೆದಿದೆ. ಇಲ್ಲಿಯವರೆಗೆ ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ.
8 coaches of Train 12520 Agartala –LTT Express derailed at Dibalong station near Lumding at 15:55 Hrs today. ???????????????????? ???????????? ???????????????? ???????? ???????????????????? ???????????????????????????????? ???????? ???????????????????????? ???????????? ???????????? ???????????????????????????????????????? ???????????? ????????????????.
We are coordinating railway authorities…
— Himanta Biswa Sarma (@himantabiswa) October 17, 2024
ರಕ್ಷಣಾ ಕಾರ್ಯಾಚರಣೆಗಾಗಿ ಹಿರಿಯ ಅಧಿಕಾರಿಗಳೊಂದಿಗೆ ಅಪಘಾತ ಸಂಭವಿಸಿದ ಸ್ಥಳಕ್ಕೆ ತೆರಳಿದ್ದಾರೆ. ಸದ್ಯಕ್ಕೆ ಲುಮ್ಡಿಂಗ್-ಬದರ್‌ಪುರ ವಿಭಾಗದಲ್ಲಿ ರೈಲು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಎಲ್ಲಾ ಪ್ರಯಾಣಿಕರು ಸುರಕ್ಷತೆಯಿಂದ ಇದ್ದಾರೆ ಎಂದು ತಿಳಿಸಿದ್ದಾರೆ.
ರೈನಲ್ಲಿ ಬಂದಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಲೆಕ್ಕ ಹಾಕಲಾಗುತ್ತಿದೆ. ಹಳಿ ತಪ್ಪಿದ ಕಾರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಇತ್ತೀಚೆಗೆ ಕರ್ನಾಟದ ಮೈಸೂರು (Mysuru), ಬೆಂಗಳೂರು ಮೂಲಕವಾಗಿ ಬಿಹಾರದ ದರ್ಭಾಂಗ್‌ಗೆ (Darbhanga) ಹೊರಟಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಚೆನ್ನೈನ ಕವರಪೆಟ್ಟೈ ಬಳಿ ಭೀಕರ ಅಪಘಾತಕ್ಕೊಳಗಾಗಿತ್ತು. ಲೂಪ್ ಲೈನ್‍ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಭಾಗಮತಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು, 13 ಬೋಗಿಗಳು ಹಳಿ ತಪ್ಪಿದ್ದವು.