ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಎಂಜಿನಿಯರ್ ಒಬ್ಬ ಮೃತ ಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನೆಡೆದಿದೆ.
30 ವರ್ಷದ ಮಂಜೇಶ್ ಮೃತ ದುರ್ದೈವಿ. ರಾಮನಗರ ಜಿಲ್ಲೆ ಚನ್ನಪಟ್ಟಣ ಮೂಲದ ಮಂಜೇಶ್ ಧಾರ್ಮಿಕ ಕಾರ್ಯದ ನಿಮ್ಮಿತ್ತ ಮುತ್ತತ್ತಿಗೆ ಬಂದಿದ್ದರು. ಪೂಜೆ ಮುಗಿಸಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದಾರೆ.
ಈ ವೇಳೆ ನೀರಿನ ಸೆಳೆತಕ್ಕೆ ಸಿಕ್ಕಿ ಮೃತಪಟ್ಟಿದ್ದಾರೆ. ಘಟನೆಯಿಂದಾಗಿ ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.