NEET: ಪರೀಕ್ಷಾ ಮಂಡಳಿ ಟ್ರಂಕ್‌ನಿಂದ ಪ್ರಶ್ನೆಪತ್ರಿಕೆ ಕದ್ದಿದ್ದ ಎಂಜಿನಿಯರ್‌ ಬಂಧನ

Public TV
1 Min Read
neet protest

ನವದೆಹಲಿ: ಬಿಹಾರದ ಹಜಾರಿಬಾಗ್‌ನಲ್ಲಿರುವ ಪರೀಕ್ಷಾ ಮಂಡಳಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ (NTA) ಟ್ರಂಕ್‌ನಿಂದ ನೀಟ್-ಯುಜಿ (NEET) ಪೇಪರ್ ಕದ್ದಿದ್ದ ವ್ಯಕ್ತಿಯೊಬ್ಬನನ್ನು ಸಿಬಿಐ (CBI) ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಪೇಪರ್ ಕದ್ದ ಪಂಕಜ್ ಕುಮಾರ್ ಎಂಬಾತನನ್ನು ಪಾಟ್ನಾದಲ್ಲಿ ಬಂಧಿಸಲಾಗಿದೆ. ಈತ 2017 ರಲ್ಲಿ ಎನ್‌ಐಟಿ ಜೆಮ್‌ಶೆಡ್‌ಪುರದಲ್ಲಿ ಸಿವಿಲ್ ಎಂಜಿನಿಯರಿಂಗ್ ಮಾಡಿದ್ದ. ಆತನ ಸಹಚರ ರಾಜು ಸೋರಿಕೆಯಾದ ಪ್ರಶ್ನೆಪತ್ರಿಕೆ ಹಂಚಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಬಿಜೆಪಿ ಅವಕಾಶ ನೀಡಲ್ಲ: ಅಮಿತ್‌ ಶಾ

NEET Paper Leaked Scam

ಹಜಾರಿಬಾಗ್‌ನ ಓಯಸಿಸ್ ಶಾಲೆಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸಿಬಿಐ ತನಿಖೆಯಿಂದ ಬೆಳಕಿಗೆ ಬಂದಿದೆ. ಒಂಬತ್ತು ಸೆಟ್ ಪ್ರಶ್ನೆ ಪತ್ರಿಕೆಗಳನ್ನು ಎಸ್‌ಬಿಐ ಹಜಾರಿಬಾಗ್‌ನಿಂದ ವಿವಿಧ ಕೇಂದ್ರಗಳಿಗೆ ರವಾನಿಸಲಾಗಿದೆ. ಓಯಸಿಸ್ ಶಾಲಾ ಕೇಂದ್ರವನ್ನು ತಲುಪಿದ್ದ ಪ್ರಶ್ನೆಪತ್ರಿಕೆಗಳ ಸೀಲುಗಳನ್ನು ತೆಗೆದಂತಿತ್ತು. ಆದರೆ ಅಲ್ಲಿನ ಸಿಬ್ಬಂದಿ ಈ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲ. ಹೀಗಾಗಿ ಪ್ರಕರಣದಲ್ಲಿ ಅವರನ್ನೂ ಪಾತ್ರಧಾರಿಗಳು ಎಂದು ಪರಿಗಣಿಸಲಾಗಿದೆ ಎಂದು ಸಿಬಿಐ ತಿಳಿಸಿದೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಹಲವು ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಇದುವರೆಗೆ ಸುಮಾರು 60 ಮಂದಿಯನ್ನು ಬಂಧಿಸಿದೆ. ಇದನ್ನೂ ಓದಿ: Jammu Terrorist Attack: ಜಮ್ಮುವಿನಲ್ಲಿ ದಿಢೀರ್‌ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವುದು ಏಕೆ?

ಈ ವರ್ಷದ ಮೇ 5 ರಂದು ವಿದೇಶದ 14 ಸೇರಿದಂತೆ 571 ನಗರಗಳ 4,750 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಯಿತು. 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Share This Article