ಹೈದರಾಬಾದ್: ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಗರ್ಭಪಾತ ಮಾಡಲು ಯತ್ನಿಸಿದ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.
ಕೋರ್ಟ್ ಅನುಮತಿ ಇಲ್ಲದ ಹೊರತು 20 ವಾರಗಳಿಗಿಂತ ಹೆಚ್ಚಿನ ಅವಧಿಯ ಭ್ರೂಣವನ್ನು ಗರ್ಭಪಾತ ಮಾಡಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಅನುಶಾ ಮೆಟರ್ನಿಟಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‍ನ ವೈದ್ಯರ ವರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
21 ವರ್ಷ ವಯಸ್ಸಿನ ಕೆ. ಹಾರಿಕಾ ಮೃತ ಯುವತಿ. 7 ತಿಂಗಳ ಗರ್ಭಿಣಿಯಾಗಿದ್ದ ಹಾರಿಕಾ ಹಾಗೂ ಆಕೆಯ ಪ್ರಿಯತಮ ಮಧು ಆಗಸ್ಟ್ 5ರಂದು ಗರ್ಭಪಾತ ಮಾಡಿಸಲು ಆಸ್ಪತ್ರೆಗೆ ಹೋಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆಸ್ಪತ್ರೆಯ ಮೇಲ್ವಿಚಾರಕಿ ಡಾ. ಗಿರಿಜಾ ರಾಣಿ ಗರ್ಭಪಾತ ಮಾಡಲು ಒಪ್ಪಿ 20 ಸಾವಿರ ರೂ. ಕೇಳಿದ್ದರು. ಆದ್ರೆ ಗರ್ಭಪಾತ ಯತ್ನ ವಿಫಲವಾಗಿದ್ದು ಹಾರಿಕಾಗೆ ತೀವ್ರ ರಕ್ತಸ್ರಾವವಾಗಿತ್ತು. ನಂತರ ಆಕೆಯನ್ನ ದಿಲ್‍ಕುಶ್‍ನಗರದ ಮತ್ತೊಂದು ಮೆಟರ್ನಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಇಲ್ಲಿನ ವೈದ್ಯರು ಹೇಳಿದ್ದಾರೆ. ಆದ್ರೆ ಅಲ್ಲಿಗೆ ಕರೆದುಕೊಂಡು ಹೋಗುವಷ್ಟರಲ್ಲಿ ಯುವತಿ ಸಾವನ್ನಪ್ಪಿದ್ದಾರೆ.
Advertisement
ಹಾರಿಕಾ ಪೋಷಕರು ಆಸ್ಪತ್ರೆಗೆ ದೌಡಾಯಿಸಿದ್ದು, ಗರ್ಭಪಾತ ಮಾಡಿದ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದಾರೆ.
Advertisement
ಪೊಲೀಸರು ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಒಸ್ಮಾನಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ವೈದ್ಯೆ ಗಿರಿಜಾ ರಾಣಿ ಹಾಗೂ ಪ್ರಿಯಕರ ಮಧು ಸದ್ಯ ಪೊಲೀಸರ ವಶದಲ್ಲಿದ್ದಾರೆ.