ಹಾವೇರಿ| ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Public TV
1 Min Read
Engineering student suicide Haveri

– ಕಸ ತುಂಬುವ ವಾಹನದಲ್ಲಿ ಮೃತದೇಹ ಸಾಗಾಟ

ಹಾವೇರಿ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ (Engineering Student) ಕೆರೆಗೆ ಹಾರಿ  ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ (Haveri) ತಾಲೂಕಿನ ದೇವಗಿರಿ (Devagiri) ಗ್ರಾಮದ ಬಳಿ ನಡೆದಿದೆ.

ಉಲ್ಲಾಸ್ ಮುರಳಿ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಉಲ್ಲಾಸ್ ಎಂಜಿನಿಯರಿಂಗ್ 4ನೇ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಒಂದು ವಿಷಯದಲ್ಲಿ ಫೇಲ್ ಆಗಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗ್ರಾಮಸ್ಥರು ಹಾಗೂ ಪೊಲೀಸರು ಮೃತದೇಹವನ್ನ ಹೊರಗೆ ತೆಗೆಯುವ ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಆಯ್ಕೆ ಪ್ರಶ್ನಿಸಿ ಅರ್ಜಿ – ಮಾ.25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ಮೃತದೇಹವನ್ನ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಪೊಲೀಸರು ಮಾನವೀಯತೆ ಮರೆತು ಕಸ ತುಂಬುವ ವಾಹನದಲ್ಲಿ ಸಾಗಾಟ ಮಾಡಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಸ ತುಂಬುವ ವಾಹನದಲ್ಲಿ ಕಾಲೇಜು ವಿದ್ಯಾರ್ಥಿಯ ಶವ ಸಾಗಿಸಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಸ್ವ ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ: ಹೆಚ್.ಎಂ.ರೇವಣ್ಣ

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಆತ್ಮಹತ್ಯೆಗೆ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಮಗೂ ವಯಸ್ಸಾಗಿದೆ, ಅಧ್ಯಕ್ಷರ ಅವಧಿ ಮುಗಿಯೋದ್ರಲ್ಲಿ ದಲಿತ ಸಿಎಂ ಮಾಡಿ – ಖರ್ಗೆಗೆ ಕಾರಜೋಳ ಸವಾಲ್

Share This Article