ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜ್‍ನ ಹಾಸ್ಟೆಲ್‍ನಲ್ಲಿ ಕೊನೆಯ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಶಿವಾನಿ ಆತ್ಮಹತ್ಯೆ ಪ್ರಕರಣಕ್ಕೆ ಕಾಲೇಜ್‍ನಲ್ಲಿ ಕೊಟ್ಟ ಕಿರುಕುಳವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.
ನಿನ್ನೆ ಶಿವಾನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಶಿವಾನಿ ಆತ್ಮಹತ್ಯೆ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ. ಶಿವಾನಿ ಆತ್ಮಹತ್ಯೆಗೆ ಕಾಲೇಜ್‍ನಲ್ಲಿ ಕೊಟ್ಟ ಕಿರುಕುಳವೇ ಕಾರಣ ಎಂದು ಪೋಷಕರು ಆರೋಪಿಸಿದ್ದು, ಮಗಳ ಸಾವಿಗೆ ನ್ಯಾಯಬೇಕು. ಪ್ರಕರಣವನ್ನು ಸಿಐಡಿಗೆ ಕೊಡಬೇಕೆಂದು ಆಗ್ರಹಿಸಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರೇಯಸಿಯ ರುಂಡ ಕಡಿದು, ಪೊಲೀಸ್ ಠಾಣೆಗೆ ತಂದ ಪಾಗಲ್ ಪ್ರೇಮಿ
ಶಿವಾನಿ ನಿನ್ನೆ ಪರೀಕ್ಷೆಗೆ ಹಾಜರಾಗದೆ ಹಾಸ್ಟೆಲ್‍ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಧ್ಯಾಹ್ನ ಹಾಸ್ಟೆಲ್ ವಾರ್ಡನ್ ಹೋಗಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಕೂಡಲೇ ವಾರ್ಡನ್ ಕೆಂಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೆ ಕಾಲೇಜ್ ಪ್ರಿನ್ಸಿಪಾಲ್ ಕೂಡ ಕೆಂಗೇರಿ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಸಿಬ್ಬಂದಿಗೆ ಮೆಣಸಿನ ಪುಡಿ ಎರಚಿ ಬೆಲೆ ಬಾಳುವ ನೆಕ್ಲೇಸ್ ಕದ್ದ ಖತರ್ನಾಕ್ ಅಪ್ಪ-ಮಗಳು