Connect with us

Crime

ಬುದ್ಧಿ ಹೇಳಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

Published

on

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ಸುರತ್ಕಲ್‍ನ ಎನ್‍ಐಟಿಕೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿವಾಸಿ, ಬಿಟೆಕ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ತೃತೀಯ ವರ್ಷದಲ್ಲಿದ್ದ ಆನಂದ್ ಪಾಠಕ್ (21) ಮೃತ ವಿದ್ಯಾರ್ಥಿ.

ತರಗತಿಗೆ ಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ಸೋಮವಾರದ ಸೆಮಿಸ್ಟರ್ ಪರೀಕ್ಷೆಗೆ ಕಾಲೇಜಿನ ಉಪನ್ಯಾಸಕರು ಅವಕಾಶ ನಿರಾಕರಿಸಿದ್ದರು. ಅಲ್ಲದೇ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಮಧ್ಯಾಹ್ನ ವಿದ್ಯಾರ್ಥಿಯನ್ನು ಕರೆದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ ಆನಂದ್ ಪಾಠಕ್, ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ರಾತ್ರಿ ವರೆಗೂ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿತ ಉಪನ್ಯಾಸಕರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಲೇಜು ಕ್ಯಾಂಪಸ್ ನಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಲೇಜಿನ ಆಡಳಿತ ವರ್ಗ ವಿಚಾರ ಹೊರಬರದಂತೆ ಮುಚ್ಚಿ ಹಾಕಿದೆಯೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews