ಬೆಂಗಳೂರು: ಕಿಲ್ಲರ್ ಬಿಎಂಟಿಸಿ (BMTC) ಬಸ್‌ಗೆ ಎಂಜಿನಿಯರಿಂಗ್ ವಿದ್ಯಾರ್ಥಿ (Engineering Student) ಬಲಿಯಾದ ಘಟನೆ ಯಶವಂತಪುರದ (Yeswanthpur) ಗೋವರ್ಧನ ಬಳಿ ನಡೆದಿದೆ.
ಗಂಗಾಧರ್ (21) ಮೃತ ವಿದ್ಯಾರ್ಥಿ. ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೂವಿನ ಮಾರ್ಕೆಟ್ ಸಮೀಪ ಘಟನೆ ನಡೆದಿದೆ. ಹೆಚ್‌ಎಎಲ್‌ಗೆ (HAL) ಇಂಟರ್ನಿಶಿಪ್ ಸರ್ಟಿಫಿಕೇಟ್ ತರಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಂಗಾಧರ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ, ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ (Accident) ಸಂಭವಿಸಿದೆ. ಇದನ್ನೂ ಓದಿ: ಪ್ರಿಯಕರನಿಂದ ವಂಚನೆ, ಕೊಲೆ ಬೆದರಿಕೆ ಆರೋಪ- ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಈ ವೇಳೆ ಬಸ್‌ನ ಚಕ್ರ ಗಂಗಾಧರ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಬಸ್ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದು, ಬಸ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮೃತ ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದ ಸ್ಥಳಕ್ಕೆ ಯಶವಂತಪುರ ಸಂಚಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ಎಸಗಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಂದ ಕಿರುಕುಳ – ವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ
Web Stories