ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಾರಕ ಡೆಂಗ್ಯೂ ಜ್ವರಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.
ಸುಷ್ಮಿತಾ ಆರಾಧ್ಯ ಮೃತ ವಿದ್ಯಾರ್ಥಿನಿ. ಈಕೆ ಬೆಂಗಳೂರಿನ ಎಂ.ಎಸ್ ರಾಮಯ್ಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತಿದ್ದಳು. ಭಾನುವಾರದಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Advertisement
ಡೆಂಗ್ಯೂ ಜ್ವರ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಸುಷ್ಮಿತಾ ಇಲ್ಲಿನ ರೇಣುಕಾ ಸ್ಟೋರ್ ಮಾಲೀಕ ನಾಗರಾಜು ಹಾಗೂ ಅನುಪಮಾ ದಂಪತಿಯ ಏಕೈಕ ಪುತ್ರಿಯಾಗಿದ್ದಳು.
Advertisement
Advertisement
Advertisement